Thursday, April 25, 2024
spot_imgspot_img
spot_imgspot_img

ವಿಟ್ಲ: ಮಹಿಳೆಯ ಮೇಲೆ ಚೂರಿ ಇರಿತ..! ಕಾರಣ ನಿಗೂಢ

- Advertisement -G L Acharya panikkar
- Advertisement -

ವಿಟ್ಲ: ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಪರಾರಿಯಾದ ಘಟನೆ ನಡೆದಿದೆ. ವಿಟ್ಲದ ಅನಂತಾಡಿಯ ಜನಪ್ರಿಯ ಗಾಡರ್ನ್‌ ಬಳಿ ಈ ಘಟನೆ ನಡೆದಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ ಹಲ್ಲೆ ಮಾಡಲಾಗಿದೆ.

ಚೂರಿ ಇರಿತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದೆ. ಸ್ಥಳೀಯರು ಗಾಯಾಳು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶಕುಂತಲಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಗಂಡ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದಾರೆ.

ಚೂರಿ ಇರಿತಕ್ಕೆ ಕಾರಣ ಯಾವುದೆಂದು ತಿಳಿದು ಬಂದಿಲ್ಲ. ಹಲ್ಲೆಗೈದ ಯುವಕ ಪೆರಾಜೆ ಕಡೆ ಓಡಿ ಹೋಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!