Saturday, May 11, 2024
spot_imgspot_img
spot_imgspot_img

ವಿಟ್ಲ : (ಮಾ.3) ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ 28ನೇ ವರ್ಷದ ವಾರ್ಷಿಕ ಮಹೋತ್ಸವ

- Advertisement -G L Acharya panikkar
- Advertisement -

ವಿಟ್ಲ : ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ 28ನೇ ವರ್ಷದ ವಾರ್ಷಿಕ ಮಹೋತ್ಸವವು ಮಾ.3 ರಂದು ಭಜನೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಶ್ರೀ ದುರ್ಗಾಪೂಜೆಯೊಂದಿಗೆ ನಡೆಯಲಿದೆ.

ಬೆಳಿಗ್ಗೆ ಗಂಟೆ 6 ಕ್ಕೆ ಗಣಪತಿ ಹೋಮ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಗುಂಪಲಡ್ಕ, ಆಲಂಗಾರು ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ಕ್ಕೆ ಚೌಕಿ ಪೂಜೆ, ಬಳಿಕ ’ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ 5.30 ಕ್ಕೆ ದೀಪ ಪ್ರತಿಷ್ಠೆ , ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಶ್ರೀ ದುರ್ಗಾಪೂಜೆ ಉದಯೇಶ ಕೆದಿಲಾಯ ವಿಟ್ಲ ಇವರಿಂದ, ರಾತ್ರಿ 8 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 5 ಕ್ಕೆ ಸರಿಯಾಗಿ ಭಜನಾ ಮಂದಿರದಲ್ಲಿ ಹಾಕಿರುವ ಭವ್ಯ ರಂಗ ಮಂಟಪದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!