Monday, June 22, 2026
spot_imgspot_img
spot_imgspot_img

ವಿಟ್ಲ: ರಸ್ತೆ ದುರಸ್ತಿ ಬಗ್ಗೆ ಸ್ಪಂದಿಸದ ಜನಪ್ರತಿನಿಧಿಗಳು; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

- Advertisement -
- Advertisement -
vtv vitla

ವಿಟ್ಲ: ದಕ್ಷಿಣ ಕನ್ನಡ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅತೀ ಹೆಚ್ಚು ಪರಿಶಿಷ್ಟ ಪಂಗಡದ ಜನರು ವಾಸವಿರುವ ಪ್ರದೇಶದಲ್ಲಿ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು ಈಗಾಗಲೇ ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಈ ಬಗ್ಗೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳದ ಹಿನ್ನಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಲಪದವು, ನೆಕ್ಕರೆ ಕಮ್ಮಾರು, ಕೋಡಂದೂರು, ಪದವು, ಸರ್ವಋತು ಸಂಪರ್ಕ ರಸ್ತೆಯ ದುರಸ್ತಿಗೆ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ, ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಕೇವಲ ಪೊಳ್ಳು ಭರವಸೆ ನೀಡುತ್ತಿರುವ ಜನಪ್ರತಿನಿಧಿಗಳ ಧೋರಣೆಗೆ ಬೇಸತ್ತು ಮುಂದಿನ ವಿಧಾನಸಭಾ ಚುನಾವಣೆಯನ್ನು ಎಲ್ಲಾ ಪಕ್ಷ, ಜಾತಿ ಮರೆತು ಸಾಮೂಹಿಕವಾಗಿ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್‌ ಅಳವಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!