Sunday, June 14, 2026
spot_imgspot_img
spot_imgspot_img

ವಿಟ್ಲ: ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮೊಹಮ್ಮದ್ ಅಜ್ಮಾಲ್ ದ್ವಿತೀಯ ಸ್ಥಾನ

- Advertisement -
- Advertisement -
vtv vitla

ವಿಟ್ಲ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ಇದರ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲೆಯ ಡಿ.ವಿ.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2022 -23ರ ಪ್ರೌಢ ವಿಭಾಗದ ಅರೇಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಜ್ಮಾಲ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಇವರು ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಹಾಗೂ ರೂ 4000 ನಗದು ಬಹುಮಾನವನ್ನು ಪಡೆದಿರುತ್ತಾರೆ.

ಪಠ್ಯ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿರುವ ವಿದ್ಯಾರ್ಥಿ ಮೊಹಮ್ಮದ್ ಅಜ್ಮಾಲ್ ಮಾಣಿ ನಿವಾಸಿಗಳಾದ ಮೊಹಮ್ಮದ್ ಇಬ್ರಾಹಿಂ ಮತ್ತು ಝೈನಬಾ ದಂಪತಿಯ ಪುತ್ರ. ಈತನ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಾಲಾ ಆಡಳಿತಾಧಿಕಾರಿ , ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

- Advertisement -

Related news

error: Content is protected !!