Wednesday, April 24, 2024
spot_imgspot_img
spot_imgspot_img

ವಿಟ್ಲ: ಲಂಚ ಆರೋಪ; ಪ.ಪಂ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ; ಘಟನೆಯನ್ನು ಖಂಡಿಸಿ ವಿಟ್ಲ ಪ.ಪಂ ಸಿಬ್ಬಂದಿಗಳು ಕೆಲಸ ಸ್ಥಗಿತಗೊಳಿಸಿ ಮುಷ್ಕರ..!

- Advertisement -G L Acharya panikkar
- Advertisement -

ವಿಟ್ಲ: ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯತ್ ಮಾಜಿ ಸದಸ್ಯರೊಬ್ಬರು ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ರಾಜೇಶ್ ರವರ ಮೇಲೆ ಲಂಚ ಕೇಳಿದ ಆರೋಪ ಹೊರಿಸಿ ಮೇಲಾಧಿಕಾರಿಗಳಿಗೆ ದೂರು ಕೊಟ್ಟಿದ್ದರು.

ಇದರಿಂದ ಮನನೊಂದ ರಾಜೇಶ್ ರವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು ಈ ವಿಚಾರ ರಾಜೇಶ್ ಸ್ನೇಹಿತರ ಗಮನಕ್ಕೆ ಬಂದಿದ್ದು, ತಕ್ಷಣವೇ ಅವರನ್ನು ರಕ್ಷಿಸಿದ್ದಾರೆ. ಬಳಿಕ ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ವಿಟ್ಲ: ಡೆತ್ ನೋಟ್ ಬರೆದಿಟ್ಟು ಪಟ್ಟಣ ಪಂಚಾಯತ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಸಿಬ್ಬಂದಿಗೆ ಕಿರುಕುಳ ಘಟನೆಯನ್ನು ಖಂಡಿಸಿ ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದಾರೆ. ಲಂಚದ ಆರೋಪ ಹೊರಿಸಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಮಗೆ ಕೂಡ ಕಿರುಕುಳ ನೀಡುತ್ತಿದ್ದು, ಕೆಲಸ ನಿರ್ವಹಿಸಲು ಸಮಸ್ಯೆಯಾಗುತ್ತಿದೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.ಮುಖ್ಯಾಧಿಕಾರಿಗೆ ಈ ಬಗ್ಗೆ ಮನವಿ ಸಲ್ಲಿಸಿ ಬಳಿಕ ಕೆಲಸ ಆರಂಭಿಸಲಿದ್ದೇವೆ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ.

vtv vitla
suvarna gold
- Advertisement -

Related news

error: Content is protected !!