Friday, May 3, 2024
spot_imgspot_img
spot_imgspot_img

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ದ.ಕ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ, ಮಂಗಳೂರು, ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ(ನಿ.) ಕೊಡಂಗಾಯಿ ಇದರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ

- Advertisement -G L Acharya panikkar
- Advertisement -

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ದ.ಕ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ, ಮಂಗಳೂರು, ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ(ನಿ.) ಕೊಡಂಗಾಯಿ ಇದರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರವು ಆ.1 ರಂದು ಬೆಳಿಗ್ಗೆ ಗಂಟೆ 9.30ರಿಂದ ಮಧ್ಯಾಹ್ನ 1 ರ ತನಕ ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನ, ಕೊಡಂಗಾಯಿಯಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ವಿಟ್ಲಪಡ್ನೂರು ವ್ಯ.ಸೇ.ಸ.ಸಂಘ(ನಿ.) ಕೊಡಂಗಾಯಿ ಇದರ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷ ಲ|ಜಯರಾಮ ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನಿಕಟ ಪೂರ್ವ ಪ್ರಾಂತೀಯ ಅಧ್ಯಕ್ಷ ಲ|ಸುದರ್ಶನ್ ಪಡಿಯಾರ್‍ ಎಂ.ಜೆ.ಎಫ್, ಡಾ.ಗೌರಿ ಪೈ, ಮುಖ್ಯಸ್ಥರು ಆನಂದ ಸೇವಾಶ್ರಮ ಪುತ್ತೂರು, ವಿಟ್ಲ ಪಡ್ನೂರು ವ್ಯ.ಸೇ.ಸ.ಸಂಘ ಉಪಾಧ್ಯಕ್ಷ ಬಾಲಕೃಷ್ಣ ರೈ ಮೂರ್ಜೆಬೆಟ್ಟು, ನೇತ್ರತಜ್ಞ ಶಾಂತರಾಜು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ನೇತ್ರತಜ್ಞೆ ಶ್ರೀನಿಧಿ, ಲ|ವಿಟ್ಲ ಸಿಟಿ ಕೋಶಾಧಿಕಾರಿ ಲ|ಒ.ಎ.ಕೃಷ್ಣ, ಉಪಾಧ್ಯಕ್ಷ ಲ|ದಿನಕರ ಆಳ್ವ, ಸದಸ್ಯರಾದ ಧರ್ಣಪ್ಪ ಗೌಡ ಬನ, ಸದಾನಂದ ಗೌಡ ಸೇರಾಜೆ, ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುದೀರ್ಘ 36ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್‍ಯನಿರ್ವಹಣಾಧಿಕಾರಿ ಲಕ್ಷ್ಮೀಶ ರೈ ಎರ್ಮೆನಿಲೆ ಇವರನ್ನು ಲ|ವಿಟ್ಲ ಸಿಟಿ ಪರವಾಗಿ ಸನ್ಮಾನಿಸಲಾಯಿತು.

ಲ.ವಿಟ್ಲ ಸಿಟಿಯ ನಿಕಟಪೂರ್ವ ಅಧ್ಯಕ್ಷರಾದ ಸಂದೇಶ್ ಶೆಟ್ಟಿ ಬಿಕನಾಜೆ ಸ್ವಾಗತಿಸಿ, ಕಾರ್‍ಯಕ್ರಮ ನಿರೂಪಿಸಿದರು. ನೂತನ ಕಾರ್‍ಯಕನಿರ್ವಹಣಾಧಿಕಾರಿ ಸಂಧ್ಯಾ ಶೆಟ್ಟಿ ವಂದಿಸಿದರು.
250 ಶಿಬಿರಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದರು.

- Advertisement -

Related news

error: Content is protected !!