Monday, June 30, 2025
spot_imgspot_img
spot_imgspot_img

ವಿಟ್ಲ: ಲಾರಿ ಡಿಕ್ಕಿ ಹೊಡೆದು ವ್ಯಕ್ತಿ “ಸ್ಪಾಟ್ ಡೆತ್”

- Advertisement -
- Advertisement -

ವಿಟ್ಲ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ- ಕಾಸರಗೋಡು ರಸ್ತೆಯಲ್ಲಿ ನಡೆದಿದೆ.

ವಿಟ್ಲ- ಕಾಸರಗೋಡು ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್ ಹತ್ತಿರ ಕಲ್ಲು ಸಾಗಟ ಮಾಡುವ ಲಾರಿ ವ್ಯಕ್ತಿಗೆ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ವಿಟ್ಲ ಪೋಲಿಸರು ಭೇಟಿ ನೀಡಿದ್ದಾದ್ದು, ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಡಲಾಗಿದೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಮೃತರು ಕುಡಿದ ಮತ್ತಿನಲ್ಲಿ ತೂರಾಡಿಕೊಂಡು ಹೋಗಿ ಲಾರಿಯಡಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಘಟನೆಯ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!