Tuesday, July 1, 2025
spot_imgspot_img
spot_imgspot_img

ವಿಟ್ಲ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

- Advertisement -
- Advertisement -

ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾದಿಕಾರಿಯವರ ಕಛೇರಿ ಬಂಟ್ವಾಳ ಮತ್ತು ಚಂದಳಿಕೆ ವಿದ್ಯಾವರ್ಧಕ ಸಂಘ(ರಿ.), ಚಂದಳಿಕೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ, ಚಂದಳಿಕೆ ಇದರ ಸಹಯೋಗದಲ್ಲಿ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ 2022-2023 ಚಂದಳಿಕೆ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.

ಗಣ್ಯಾತಿಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಗಣ್ಯರು ಉಪಸ್ಥಿತರಿದ್ದರು. ವಿಟ್ಲ ವಲಯ ಮಟ್ಟದ ವಿವಿಧ ಶಾಲೆಯ ತಂಡಗಳು ಭಾಗಿಯಾಗಿದ್ದವು.

ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಸತ್ಯಸಾಯಿ ಲೋಕ ಸೇವಾ ಅಳಿಕೆ ಪ್ರಥಮ ಸ್ಥಾನ ಹಾಗೂ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ದ್ವಿತೀಯ ಸ್ಥಾನ ಪಡೆದಿದೆ.

ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಸ.ಹಿ.ಪ್ರಾ.ಶಾಲೆ ಬೊಳಂತಿಮೊಗರು ಪ್ರಥಮ ಸ್ಥಾನ ಹಾಗೂ ಸರಕಾರಿ ಪ್ರೌಢ ಶಾಲೆ ವಿಟ್ಲ ದ್ವಿತೀಯ ಸ್ಥಾನ ಪಡೆದಿದೆ.

ಪ್ರಾಥಮಿಕ ವಿಭಾಗದಲ್ಲಿ ಭಾಗವಹಿಸಿದ ಒಟ್ಟು ಕ್ರೀಡಾಪಟುಗಳ ಸಂಖ್ಯೆ 200 ಬಾಲಕರ ವಿಭಾಗದಲ್ಲಿ 15 ತಂಡಗಳು ಹಾಗೂ ಬಾಲಕಿಯರ ವಿಭಾಗದಲ್ಲಿ 4 ತಂಡಗಳು ಭಾಗವಹಿಸಿದ್ದವು.

ಪ್ರೌಢ ಶಾಲಾ ಬಾಲಕರ ವಿಭಾಗದಲ್ಲಿ ವಿಠಲ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನ ಹಾಗೂ ಸೈಂಟ್ ಲಾರೆನ್ಸ್ ವಿಜಯಡ್ಕ ದ್ವಿತೀಯ ಸ್ಥಾನ ಪಡೆದಿದೆ.

ಪ್ರೌಢ ಶಾಲಾ ಬಾಲಕಿಯರ ವಿಭಾಗದಲ್ಲಿ ಸತ್ಯಸಾಯಿ ಲೋಕ ಸೇವಾ ಪ್ರೌಢ ಶಾಲೆ ಅಳಿಕೆ ಪ್ರಥಮ ಸ್ಥಾನ ಹಾಗೂ ಸರಕಾರಿ ಪ್ರೌಢ ಶಾಲೆ ವಿಟ್ಲ ದ್ವಿತೀಯ ಸ್ಥಾನ ಪಡೆದಿದೆ.

ಪ್ರೌಢ ವಿಭಾಗದಲ್ಲಿ ಒಟ್ಟು 186 ಕ್ರೀಡಾಪಟುಗಳು ಭಾಗವಹಿಸಿದ್ದು, ಬಾಲಕರ ವಿಭಾಗದಲ್ಲಿ 11ತಂಡ ಹಾಗೂ ಬಾಲಕಿಯರ ವಿಭಾಗದಲ್ಲಿ 5 ತಂಡ ಭಾಗವಹಿಸಿದ್ದವು.

astr
- Advertisement -

Related news

error: Content is protected !!