Monday, April 29, 2024
spot_imgspot_img
spot_imgspot_img

ವಿಟ್ಲ: ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ವಿಟ್ಲ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.18ರಂದು ಪೊನ್ನೊಟ್ಟು ‘ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.

ಈ ಸಭೆಯಲ್ಲಿ 2020-21 ನೇ ಸಾಲಿನ ವಾರ್ಷಿಕ ವರದಿ ಮಂಡನೆ ಹಾಗೂ ಜುಮಾ ಖರ್ಚು ವ್ಯಾಪಾರ ಲಾಭ ನಷ್ಟ ಮತ್ತು ಆಸ್ತಿ ಜವಾಬ್ದಾರಿ ತಖ್ತೆಗಳ ಮಂಜೂರಾತಿ, ಲೆಕ್ಕ ಪರಿಶೋಧನೆ, ಅಂದಾಜು ಆಯವ್ಯಯ ಪಟ್ಟಿ, ಲಾಭಾಂಶ ವಿಂಗಡನೆ, ಸಂಯೋಜಿತ ಸಂಸ್ಥೆಗಳಿಗೆ ಪ್ರತಿನಿಧಿಗಳ ಆಯ್ಕೆ, ಲೆಕ್ಕ ಪರಿಶೋಧಕರ ಆಯ್ಕೆ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಿತು.

2020-21ನೇ ಸಾಲಿನಲ್ಲಿ ಸಂಘವು 147 ಕೋಟಿ ವ್ಯವಹಾರ ಮಾಡಿದೆ. 59 ಲಕ್ಷಕ್ಕೂ ಅಧಿಕ ಲಾಭಾಂಶ ಗಳಿಸಿದೆ. ಈ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇಕಡಾ 80ಕ್ಕಿಂತ ಅಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ ಯನ್, ಉಪಾಧ್ಯಕ್ಷರು ಮಹಾಬಲೇಶ್ವರ ಭಟ್, ನಿರ್ದೇಶಕರಾದ ಉದಯ ಕುಮಾರ್, ದಯಾನಂದ ಶೆಟ್ಟಿ ಉಜಿರೆಮಾರ್‌, ಸದಾನಂದ ಗೌಡ, ರಾಘವೇಂದ್ರ ಪೈ, ದಿನೇಶ ಕೆ, ವಾಸು ಸಿ. ಹೆಚ್, ಶಿವಪ್ಪ ನಾಯ್ಕ, ಅಚ್ಯುತ ನಾಯಕ್,ಗೌರಿ ಎಸ್ ಎನ್ ಭಟ್, ಸಂಗೀತಾ ಯನ್, ಕವಿತಾ ಕೆ. ಯಲ್ ಉಪಸ್ಥಿತರಿದ್ದರು.

vtv vitla
vtv vitla
- Advertisement -

Related news

error: Content is protected !!