Saturday, April 20, 2024
spot_imgspot_img
spot_imgspot_img

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟ

- Advertisement -G L Acharya panikkar
- Advertisement -

ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು, ದ.ಕ. ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ, ಮತ್ತು ವಿಠ್ಠಲ್ ಜೇಸೀಸ್ ಅಂಗ್ಲ ಮಾಧ್ಯಮ ಪ್ರೌಢ ಶಾಲೆ, ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.

ಅಂತಾರಾಷ್ಟ್ರೀಯ ನೆಟ್ ಬಾಲ್ ಕ್ರೀಡಾಪಟು, ಏಕಲವ್ಯ ಪ್ರಶಸ್ತಿ ವಿಜೇತ ನಿತಿನ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವಿಷ್ಣು ಹೆಬ್ಬಾರ್, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ, ವಿಟ್ಲ ವಲಯ ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷೆ ರತ್ನಾವತಿ, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜತ್ತಪ್ಪ ಗೌಡ, ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕ ಇಂದು ಶೇಖರ್, ವಿಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಮೋಹನ ಎ , ನಿರ್ದೇಶಕ ಹಸನ್ ವಿಟ್ಲ, ಆಡಳಿತಾಧಿಕಾರಿ ರಾಧಾಕೃಷ್ಣ ಎರುಂಬು, ಪ್ರಾಂಶುಪಾಲ ಜಯರಾಮ್ ರೈ, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ ಮೊದಲಾದವರು ಉಪಸ್ಥಿತರಿದ್ದರು.

14ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ವಿಠ್ಠಲ್ ಜೇಸಿ ಆಂಗ್ಲಮಾಧ್ಯಮ ಶಾಲೆ ಪ್ರಥಮ, ಹಾಗೂ ದ್ವಿತೀಯ ಪಾಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆ ಬಜಪೆ ಪಡೆದುಕೊಂಡಿತು. 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಕುಲಶೇಖರ ಹಾಗೂ ದ್ವಿತೀಯ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಪಡೆದುಕೊಂಡಿತು.

17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥಮ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಹಾಗೂ ದ್ವಿತೀಯ ಸಂತ ರೇಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ವಾಮಂಜೂರು.17ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಕುಲಶೇಖರ ಹಾಗೂ ದ್ವಿತೀಯ ಸಂತ ರೇಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ವಾಮಂಜೂರು ಪಡೆದುಕೊಂಡಿತು.

ಉತ್ತಮ ಸವ್ಯಸಾಚಿ ಬಹುಮಾನಗಳನ್ನು 14ರ ಒಳಗಿನ ಬಾಲಕರ ವಿಭಾಗದಲ್ಲಿ ಲೌಕಿಕ್ ಟಿ ಸಾಲಿಯಾನ್ ಪಾಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆ ಬಜಪೆ ಹಾಗೂ 14ರ ಒಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಣಮ್ಯ ಜೇಸಿ ಶಾಲೆ ಹಾಗೂ 17ರ ಒಳಗಿನ ಬಾಲಕರ ವಿಭಾಗದಲ್ಲಿ ಮೊಹಮ್ಮದ್ ಮಸೂದ್ ಸಂತ ರೇಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ವಾಮಂಜೂರು ಹಾಗೂ 17ರ ಒಳಗಿನ ಬಾಲಕಿಯರ ವಿಭಾಗದಲ್ಲಿ ನಿಖಿತಾ ಸಂತ ರೇಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ವಾಮಂಜೂರು ಪಡೆದುಕೊಂಡರು.


ಉತ್ತಮ ಶೂಟರ್ ಆಗಿ 14ರ ಒಳಗಿನ ಬಾಲಕರ ವಿಭಾಗದಲ್ಲಿ ಸೂರಜ್ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಹಾಗೂ 14ರ ಒಳಗಿನ ಬಾಲಕಿಯರ ವಿಭಾಗದಲ್ಲಿ ಅಶ್ಲೀನ್ ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಕುಲಶೇಖರ 17ರ ಒಳಗಿನ ಬಾಲಕರ ವಿಭಾಗದಲ್ಲಿ ಅನಿಷಕೃಷ್ಣ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆ ಹಾಗೂ 17ರ ಒಳಗಿನ ಬಾಲಕಿಯರ ವಿಭಾಗದಲ್ಲಿ ಜಾನಿಶ್ ಡಿ ಸೋಜ ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಕುಲಶೇಖರ ಅವರು ಪಡೆದುಕೊಂಡರು.

ಶಿಕ್ಷಕಿ ನಯನಾಕ್ಷಿ ಸ್ವಾಗತಿಸಿದರು. ಜಯಶ್ರೀ ಹಾಗೂ ಲಾವಣ್ಯ ನಿರೂಪಿಸಿದರು. ದೈಹಿಕ ಶಿಕ್ಷಕ ಭಾನುಪ್ರಕಾಶ್ ವಂದಿಸಿದರು ದೈಹಿಕ ಶಿಕ್ಷಕಿ ಶಶಿಕಲಾರವರು ಬಹುಮಾನ ಪಟ್ಟಿಯನ್ನು ವಾಚಿಸಿದರು. ಶಾಲಾ ಶಿಕ್ಷಕರು ಹಾಗೂ ಶಿಕ್ಷಕೇತರರು ಸಹಕರಿಸಿದರು.

vtv vitla
- Advertisement -

Related news

error: Content is protected !!