Saturday, June 28, 2025
spot_imgspot_img
spot_imgspot_img

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೂತನ ಸಭಾಭವನ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ

- Advertisement -
- Advertisement -

ವಿಟ್ಲ: ಬಸವನಗುಡಿಯಲ್ಲಿರುವ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸಭಾಭವನ ‘ಜೇಸಿ ಪೆವಿಲಿಯನ್’ ದಿನಾಂಕ 9.12.2022 ರಂದು ಅಪರಾಹ್ನ 3.30ಕ್ಕೆ ಉದ್ಘಾಟನೆಗೊಳ್ಳಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಜನಪ್ರಿಯ ಫೌಂಡೇಶನ್ ನ ಅಧ್ಯಕ್ಷ ಡಾ. ಬಷೀರ್ ಬಿ. ಕೆ ಸಂತ ರೀಟಾ ಪ್ರೌಢ ಶಾಲಾ ಮುಖ್ಯಶಿಕ್ಷಕ ಫಾ. ಸುನಿಲ್ ಪ್ರವೀಣ್ ಪಿಂಟೋ ಹಾಗೂ ವಿಠ್ಠಲ್ ಜೇಸಿಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಲ್. ಯನ್. ಕೂಡೂರ್ ರವರು ಭಾಗವಹಿಸಲಿದ್ದಾರೆ.

ಸುಮಾರು 1300 ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಅವಕಾಶವಿರುವ ಸಭಾಂಗಣದ ಲೋಕಾರ್ಪಣೆಯ ಬಳಿಕ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ “ಶಿವಧೂತೆ ಗುಳಿಗೆ” ತುಳು ನಾಟಕ ಪ್ರದರ್ಶನಗೊಳ್ಳಲಿದೆ. 2022-23ನೇ ಸಾಲಿನ ಸಂಸ್ಥೆಯ ವಾರ್ಷಿಕೋತ್ಸವ ದಿನಾಂಕ 11.12.2022 ರಂದು ಇದೇ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಲ್. ಯನ್. ಕೂಡೂರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!