Friday, May 3, 2024
spot_imgspot_img
spot_imgspot_img

ವಿಟ್ಲ: ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪತ್ತೆ..!!

- Advertisement -G L Acharya panikkar
- Advertisement -
vtv vitla

ವಿಟ್ಲ: ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರು ಬಸ್ಸು ನಿಲ್ದಾಣದಲ್ಲಿ ವಿಟ್ಲ ಪೊಲೀಸರು ಪತ್ತೆಹಚ್ಚಿದ್ದಾರೆ.

ಇಬ್ಬರು ವಿದ್ಯಾರ್ಥಿಗಳು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ಸು ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲಿ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರು ಪತ್ತೆಯಾಗದ ಹಿನ್ನಲೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಇಬ್ಬರು ವಿದ್ಯಾರ್ಥಿಗಳನ್ನು ಪುತ್ತೂರು ಬಸ್ಸು ನಿಲ್ದಾಣದಲ್ಲಿ ವಿಟ್ಲ ಪೊಲೀಸರು ಪತ್ತೆಹಚ್ಚಿ ಠಾಣೆಗೆ ಕರೆದೊಯ್ಯುದಿದ್ದಾರೆ.

- Advertisement -

Related news

error: Content is protected !!