Thursday, March 28, 2024
spot_imgspot_img
spot_imgspot_img

ವಿಟ್ಲ: ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ತೋಟ ರಚನಾ ಕಾರ್ಯಕ್ರಮ ಮತ್ತು ಉಚಿತ ಕೋವಿಡ್ ಲಸಿಕಾ ಶಿಬಿರ

- Advertisement -G L Acharya panikkar
- Advertisement -

ವಿಟ್ಲ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಹಾಗೂ ಎನ್ ಆರ್ ಎಂ ಎಲ್ ವತಿಯಿಂದ ಪೌಷ್ಟಿಕ ತೋಟ ರಚನಾ ಕಾರ್ಯಕ್ರಮವನ್ನು ಮಾಡಲಾಯಿತು. ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಯುತ ದಿನೇಶ್ ಪೌಷ್ಟಿಕಾಂಶ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶ್ರೀ ಶಕ್ತಿ ಗುಂಪಿನ ಸದಸ್ಯರು ಅಂಗನವಾಡಿಯ ಸುತ್ತಮುತ್ತ ಪೌಷ್ಟಿಕಾಂಶವುಳ್ಳ ತರಕಾರಿ ಬೀಜ ಹಾಗೂ ಗಿಡ ನಾಟಿ ಮಾಡಿದರು. ಇದೆ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇದರ ಉಪಕೇಂದ್ರ ವೀರಕಂಬ ವತಿಯಿಂದ ಅಂಗನವಾಡಿ ಕೇಂದ್ರದಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಜನಾರ್ದನ ಪೂಜಾರಿ ಗೋಲಿಮಾರ್, ಗ್ರಾಮಾಭಿವೃದ್ಧಿ ಅಧಿಕಾರಿ ನಿಶಾಂತ್, ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಹರಿಣಾಕ್ಷಿ , ಎಂ.ಬಿ.ಕೆ ಸವಿತಾ, ಆರೋಗ್ಯ ನಿರೀಕ್ಷಕಿ ಕುಸುಮ, ಆರೋಗ್ಯ ಸಹಾಯಕಿ ಜ್ಯೋತಿ ಕೆ ಎನ್, ಆಶಾ ಕಾರ್ಯಕರ್ತರಾದ ಲೀಲಾವತಿ, ಕೋಮಲಾಕ್ಷಿ, ಯುವ ಕೇಸರಿ ಫ್ರೆಂಡ್ಸ್ ಅಧ್ಯಕ್ಷ ಯತೀಶ್, ಅಂಗನವಾಡಿ ಶಿಕ್ಷಕಿ ಮೀನಾಕ್ಷಿ, ಸಹಾಯಕಿ ಮಮತಾ, ಹಾಗೂ ಶ್ರೀ ಶಕ್ತಿ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

driving
- Advertisement -

Related news

error: Content is protected !!