Thursday, April 25, 2024
spot_imgspot_img
spot_imgspot_img

ವಿಟ್ಲ: ವೈದ್ಯಾಧಿಕಾರಿಯ ನಕಲಿ ಸಹಿ ಹಾಗೂ ಸೀಲ್ ಬಳಸಿ ವಂಚನೆ; ಖತರ್ನಾಕ್ ಐಡಿಯಾ ಮಾಡಲು ಹೋದವ ಜೈಲು ಸೇರಿದ..!

- Advertisement -G L Acharya panikkar
- Advertisement -

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಸರಕಾರಿ ವೈದ್ಯರ ನಕಲಿ ಸಹಿ ಹಾಗೂ ಸೀಲ್ ಬಳಸಿ ಸರಕಾರಕ್ಕೆ ವಂಚಿಸಲು ಪ್ರಯತ್ನಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಶಾಲಾ ರಸ್ತೆಯ ನಿವಾಸಿ ಶೇಖ್ ಫಿರೋಜ್ ಆದಂ(26)ಬಂಧಿತ ಆರೋಪಿ.

ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ! ವೇದಾವತಿ ಅವರ ನಕಲಿ ಸಹಿ ಹಾಗೂ ಸೀಲ್ ಬಳಸಿ ಸರ್ಕಾರಕ್ಕೆ ವಂಚಿಸುತ್ತಿದ್ದರು. ವೈದ್ಯಾಧಿಕಾರಿ ನೀಡಿದ ದೂರಿನ ಮೇಲೆ ಫಿರೋಜ್ ಆದಂನನ್ನು ಬಂಧಿಸಲಾಗಿದೆ.

ನ್ಯಾಷನಲ್ ಡ್ರೈವಿಂಗ್ ಸ್ಕೂಲ್‌ ಮಾಲಕನ ಮಗನಿಂದ ಕೃತ್ಯ..!
ಫಿರೋಜ್ ಆದಂ ವಿಟ್ಲ ಪೋಲಿಸ್ ಠಾಣೆಯ ಮುಂಭಾಗದಲ್ಲಿ ನ್ಯಾಷನಲ್ ಡ್ರೈವಿಂಗ್ ಸ್ಕೂಲ್ ಮಾಲಕ ಅಬ್ದುಲ್ ಖಾದರ್ ಅವರ ಮಗ. ಆತ ಗ್ರಾಹಕನೋರ್ವನ ಪಿಟ್ ನೆಸ್ ಗಾಗಿ ವೈದ್ಯರ ನಕಲಿ ಸಹಿ ಬಳಸಿದ್ದಾನೆ ಎಂಬ ಆರೋಪದಲ್ಲಿ ಪೊಲೀಸರು ಬಂಧಿಸಿ‌ ಜೈಲಿಗೆ ಕಳುಹಿಸಿದ್ದಾರೆ. ಇಸುಬು ಎಂಬ ವ್ಯಕ್ತಿ ಲೈಸನ್ಸ್ ಮರುನವೀಕರಣ ಮಾಡಲು ನ್ಯಾಷನಲ್ ಡ್ರೈವಿಂಗ್ ಸ್ಕೂಲ್ ಗೆ ಅರ್ಜಿ ಸಲ್ಲಿಸಿದರು. ಆದರೆ ಲೈಸೆನ್ಸ್ ಮರುನವೀಕರಣಕ್ಕೆ ವೈದ್ಯರ ಪಿಟ್ ನೆಸ್ ಸರ್ಟಿಫಿಕೇಟ್ ಪಡೆಯಬೇಕು ಎಂಬುದು‌ ಇಲಾಖೆಯ ನಿಯಮ.

ಆದರೆ ಈ ಡ್ರೈವಿಂಗ್ ಸ್ಕೂಲ್ ನ ಮಾಲಕನ ಮಗ ವೈದ್ಯರ ಸಹಿ ಹಾಗೂ‌ ಸೀಲ್ ನಕಲಿ ಮಾಡಿ ಲೈಸೆನ್ಸ್ ನವೀಕರಣ ಮಾಡಲು ಮೆಲ್ಕಾರ್ ಆರ.ಟಿ.ಒ. ಕಚೇರಿಗೆ ಕಳುಹಿಸಿಕೊಟ್ಟಿದ್ದರು. ಅಲ್ಲಿ ವಿಟ್ಲ ಸರಕಾರಿ ವೈದ್ಯರ ಒರಿಜಿನಲ್ ‌ಸಹಿ ಹಾಗೂ ನ್ಯಾಷನಲ್ ಡ್ರೈವಿಂಗ್ ಸ್ಕೂಲ್ಸ್ ನವರು ‌ಕಳಹಿಸಿದ ಪಿಟ್ ನೆಸ್ ಅರ್ಜಿ ಯಲ್ಲಿರುವ ವೈದ್ಯರ ಸಹಿ ತಾಳೆ ಮಾಡಿದಾಗ ವ್ಯತ್ಯಾಸ ಗಳು ಕಂಡು ಬಂದ ಹಿನ್ನೆಲೆಯಲ್ಲಿ ಆರ್.ಟಿ.ಒ.ಇನ್ಸ್ ಪೆಕ್ಟರ್ ಅವರು ವಿಟ್ಲ ವೈದ್ಯರಿಗೆ ಪರಿಶೀಲನೆಗಾಗಿ ಕಳುಹಿಸಿ ಕೊಟ್ಟಿದ್ದಾರೆ. ಈ ವೇಳೆ ಆರೋಗ್ಯ ಅಧಿಕಾರಿ ಅದನ್ನು ‌ಪರಿಶೀಲಿಸಿದಾಗ ನಕಲಿ ಸಹಿ ಹಾಕಿದ ಬಗ್ಗೆ ಗಮನಕ್ಕೆ ಬಂದು ಇದರ ತನಿಖೆಗಾಗಿ ವಿಟ್ಲ ಪೋಲಿಸರಿಗೆ ದೂರು ನೀಡಿದ್ದರು.

ಈ ದೂರಿನ ಮೇಲೆ ಕಾರ್ಯಚರಣೆ ಮಾಡಿದ ವಿಟ್ಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಅವರು ಆರಂಭದಲ್ಲಿ ಲೈಸೆನ್ಸ್ ನವೀಕರಣ ಮಾಡಲು ಅರ್ಜಿ ನೀಡಿದ ಇಸುಬು ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆತ ನ್ಯಾಷನಲ್ ಡ್ರೈವಿಂಗ್ ಸ್ಕೂಲ್ ನಲ್ಲಿ ಅರ್ಜಿ ನೀಡಿದ ಬಗ್ಗೆ ಮಾಹಿತಿ ನೀಡುತ್ತಾನೆ.ಈತನ ಮಾಹಿತಿ ಮೇಲೆ ಫಿರೋಜ್ ಆದಂ ನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿ ದಾಗ ಸತ್ಯ ಸಂಗತಿ ಬಯಲಾಗುತ್ತದೆ. ಈ ಆರೋಪದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

vtv vitla
- Advertisement -

Related news

error: Content is protected !!