Friday, April 26, 2024
spot_imgspot_img
spot_imgspot_img

ವಿಟ್ಲ: ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ಆರೋಪ; ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಜಿಲ್ಲಾ ಪಂಚಾಯಿತ್ ಸದಸ್ಯರಾದ ಎಂ ಎಸ್ ಮಹಮ್ಮದ್ ಆಗ್ರಹ

- Advertisement -G L Acharya panikkar
- Advertisement -

ವಿಟ್ಲ: ರಾಜ್ಯ ಮಹಿಳಾ ಮತ್ತು ಮಕ್ಕಳಾ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ತಕ್ಷಣವೇ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಂ ಎಸ್ ಮಹಮ್ಮದ್ ಆಗ್ರಹಿಸಿದ್ದಾರೆ. ಅವರು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಮಾತೃಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಈ ಸಂದರ್ಭ ಬಿಜೆಪಿ ಪಕ್ಷ ವಿರೋಧ ವ್ಯಕ್ತಪಡಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಈ ಕಾರ್ಯಕ್ರಮವನ್ನು ನಿಭಾಯಿಸಿತ್ತು. ಬಿಜೆಪಿ ಆಡಳಿತದಲ್ಲಿ ಶಶಿಕಲಾ ಜೊಲ್ಲೆ ಅವರು ಸಚಿವೆ ಆಗಿ ಕೆಲಸ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಮಹಿಳೆಯರು ಪ್ರಮಾಣಿಕ ಮತ್ತು ಜವಾಬ್ದಾರಿಯುತವಾಗಿ ತಮಗೆ ನೀಡಿದ ಸ್ಥಾನವನ್ನು ರಾಜ್ಯದಲ್ಲಿ ನಿಭಾಯಿಸುತ್ತಿದ್ದಾರೆ. ಆದರೆ ಸಚಿವೆ ಶಶಿಕಲಾ ಜೊಲ್ಲೆ ಅವರು ತಮಗೆ ನೀಡಿದ ಅಧಿಕಾರವನ್ನು ದುರಪಯೋಗಪಡಿಸಿಕೊಂಡಿದ್ದಾರೆ. ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಇವರ ಮೇಲೆ ಮೊಟ್ಟೆ ಹಗರಣ ಆರೋಪವು ಇದ್ದು, ಮೊಟ್ಟೆ ಮೇಲೆ ಜೊಲ್ಲು ಸುರಿಸಿದ ಕೃತ್ಯ ಖಂಡನೀಯವಾಗಿದೆ. ಒಬ್ಬ ಮಹಿಳೆ ಸಚಿವೆಯಾಗಿ ಇಂತಹ ನೀಚ ಕೆಲಸಕ್ಕೆ ಇಳಿದಿರುವುದು ಇಡೀ ರಾಜ್ಯದ ಮಹಿಳೆಯರು ತಲೆ ತಗ್ಗಿಸುವಂತೆ ಮಾಡಿದ್ದಾರೆ ತಕ್ಷಣವೇ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಬಿಜೆಪಿ ಸರ್ಕಾರ ಪ್ರತಿಯೊಬ್ಬರು ಸಚಿವರು ಮತ್ತು ಶಾಸಕರು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇವರಿಂದ ಜನರಿಗೆ ಉತ್ತಮ ಆಡಳಿತ ನೀಡಲು ಸಾಧ್ಯವಿಲ್ಲ. ಇಂತಹ ಸರ್ಕಾರವನ್ನು ವಜಾ ಮಾಡಬೇಕು. ನಳಿನ್ ಕುಮಾರ್ ಅವರ ಆಡಿಯೋ ವೈರಲ್ ಆಗಿದ್ದರೂ ಅದು ನನ್ನದಲ್ಲ ಎಂದು ಸ್ಪಷ್ಟನೆ ನೀಡುತ್ತಿರುವುದು ನಾಚೀಕೆಗೇಡಿನ ಕೆಲಸವಾಗಿದೆ ಎಂದು ದೂರಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ಮಾತನಾಡಿ ಪುತ್ತೂರು ನಗರಸಭೆ ಗೂಡಾಂಗಡಿಗಳನ್ನು ತೆರವು ಮಾಡಿರುವ ಕಾರ್ಯ ಖಂಡನೀಯವಾಗಿದ್ದು, ಕೊರೊನಾ ಸಂಕಷ್ಟದ ನಡುವೆಯೂ ಏಕಾಏಕಿ ಯಾವುದೇ ಮಾಹಿತಿ ನೀಡಿದೇ ಇಂತಹ ಕಾರ್ಯ ಮಾಡಿರುವುದನ್ನು ಕಾಂಗ್ರೆಸ್ ಖಂಡಿಸುತ್ತದೆ. ಅವರಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ಜಿಲ್ಲಾ ಅಲ್ಪಸಂಖ್ಯಾತ ಘಟಕ ಸಂಯೋಜಕ ಅಶೋಕ್ ಡಿಸೋಜ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಂ ಕುದ್ದುಪದವು, ಅಳಿಕೆ ಗ್ರಾ.ಪಂ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಅಳಿಕೆ ಗ್ರಾ.ಪಂ ಉಪಾಧ್ಯಕ್ಷಜಗದೀಶ ಶೆಟ್ಟಿ ಮುಳಿಯಗುತ್ತು, ಸೀತಾರಾಮ ಶೆಟ್ಟಿ, ಕಾಂಗ್ರೆಸ್ ಅಧ್ಯಕ್ಷ ವಿ.ಕೆ.ಎಂ ಅಶ್ರಪ್, ಕಾರ್ಮಿಕ ವಿಭಾಗದ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ, ಬೂತ್ ಅಧ್ಯಕ್ಷ ಎನ್‌ಎಸ್‌ಡಿ ಅಶೋಕ್, ಎಸ್‌ಕೆ ಮೊಹಮ್ಮದ್ ಉಪಸ್ಥಿತರಿದ್ದರು.

- Advertisement -

Related news

error: Content is protected !!