Tuesday, April 30, 2024
spot_imgspot_img
spot_imgspot_img

ವಿಟ್ಲ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಮತ ಪ್ರವಚನ..!? ಘಟನಾ ಸ್ಥಳಕ್ಕಾಗಮಿಸಿ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಹಿಂ.ಜಾ.ವೇ ಕಾರ್ಯಕರ್ತರು

- Advertisement -G L Acharya panikkar
- Advertisement -

ವಿಟ್ಲ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದ ಹಿನ್ನೆಲೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆಗಮಿಸಿ ಹಿಂದೂ ವಿದ್ಯಾರ್ಥಿಗಳನ್ನು ಹೊರಕ್ಕೆ ಕಳುಹಿಸಿದ ಘಟನೆ ಅಡ್ಯನಡ್ಕದಲ್ಲಿ ನಡೆದಿದೆ.

ನುಸ್ರುತುಲ್ ಇಸ್ಲಾಮಿಕ್ ಯಂಗ್ ಮೆನ್ಸ್ ಅಸೋಸಿಯೇಷನ್ (NIYA) ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರಕ್ಕೆ ಅಡ್ಯನಡ್ಕ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಅದರಲ್ಲೂ ಹಿಂದೂ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ತೆರಳುವಂತೆ ಶಾಲಾ ಪ್ರಾಂಶುಪಾಲರು ತಿಳಿಸಿದ್ದು, ಈ ಹಿನ್ನೆಲೆ ಅಲ್ಲಿಗೆ ತೆರಳಿದ ವಿದ್ಯಾರ್ಥಿಗಳಿಗೆ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ಮಾಡಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಹಿಂದೂ ಜಾಗರಣ ವೇದಿಕೆಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಹಿಂದೂ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕಾರ್ಯಾಗಾರಕ್ಕೆ ತೆರಳುವಂತೆ ಶಾಲಾ ಪ್ರಾಂಶುಪಾಲರು ತಿಳಿಸಿದ್ದು, ನಮಗೆ ಅಲ್ಲಿಗೆ ತೆರಳಲು ಇಷ್ಟವಿಲ್ಲದಿದ್ದರೂ ಒತ್ತಾಯ ಪೂರ್ವಕವಾಗಿ ಕಳುಹಿಸಿಕೊಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಾರ್ಯಗಾರದಲ್ಲಿ ಇಸ್ಲಾಂ ಮತದ ಬಗ್ಗೆ ಮತಪ್ರವಚನ ನೀಡಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಹಿಂದೂ ಜಾಗರಣ ವೇದಿಕೆಯವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಕಾರ್ಯಕರ್ತರು ಹಿಂದೂ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ, ಕಾರ್ಯಕ್ರಮ ಆಯೋಜನೆ ಮಾಡಿದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!