Sunday, May 19, 2024
spot_imgspot_img
spot_imgspot_img

ವಿಟ್ಲ: ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಇದರ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪೌಷ್ಠಿಕ ಆಹಾರ ಮೇಳ ಕಾರ್ಯಕ್ರಮ

- Advertisement -G L Acharya panikkar
- Advertisement -

ಗೋಳ್ತಮಜಲು: ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ವಿಟ್ಲ ಇದರ ವತಿಯಿಂದ ಪರಿಸರ ಸಂರಕ್ಷಣೆಯ ಸಲುವಾಗಿ ಸರಕಾರಿ ಪ್ರೌಢಶಾಲೆ ಗೋಳ್ತಮಜಲು ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ ಹಾಗೂ ಪೌಷ್ಠಿಕ ಆಹಾರ ಮೇಳ ಕಾರ್ಯಕ್ರಮ ನಡೆಯಿತು. ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಝಾನ್ಸಿರಾಣಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ಜಾನಪದ ನೃತ್ಯ ಹಾಗೂ ನೃತ್ಯ ಭಜನೆ ನಡೆಯಿತು. ಬಳಿಕ ಸದಸ್ಯರು ಮನೆಯಲ್ಲಿ ತಯಾರಿಸಿ ತಂದಿದ್ದ ತಜಂಕ್ ವಡೆ, ವಿಟಮಿನ್ ಸೊಪ್ಪು ಪಲ್ಯ, ಕೆಸುವಿನ ದಂಡಿನ ಸಾಂಬಾರು,ಹಲಸಿನ ಬೀಜದ ಲಡ್ಡು, ನುಗ್ಗೆ ಸೊಪ್ಪು ಪಲ್ಯ, ಕ್ಯಾರೆಟ್ ಹಲ್ವ, ಸೋನೆ ಸೊಪ್ಪು ಚಟ್ನಿ, ವಿವಿಧ ರೀತಿಯ ಖಾದ್ಯಗಳನ್ನು ಹಂಚಿದರು. ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿದವರಿಗೆ ಬಹುಮಾನ ನೀಡಲಾಯಿತು.

ಇದನ್ನೂ ಓದಿ: ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಕಾರು!

ಇದನ್ನೂ ಓದಿ: ಮಂಗಳೂರು: ಅಪಘಾತಕ್ಕೆ ಸಂಬಂಧಿಸಿ ವಾಗ್ವಾದ- ಪೊಲೀಸರಿಂದ ಲಘು ಲಾಠಿ ಪ್ರಹಾರ

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ 2 ನೇ ವಿಭಾಗದ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಪಂಚಾಯತ್ ಸದಸ್ಯೆ ಜಯಂತಿ ಜನಾರ್ಧನ್, ಗೋಳ್ತಮಜಲು ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲತಾ , ಗ್ರಾಮಾಭಿವೃದ್ಧಿ ಯೋಜನೆ ವೀರಕಂಭ ಒಕ್ಕೂಟದ ಅಧ್ಯಕ್ಷ ಕೊರಗಪ್ಪ ನಾಯ್ಕ ಸಿಂಗೇರಿ, ಯೋಜನೆಯ ಕೃಷಿ ಅಧಿಕಾರಿ ಚಿದಾನಂದ , ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ, ಸೇವಾ ಪ್ರತಿನಿಧಿ ರೇವತಿ, ಹಾಗೂ ಝಾನ್ಸಿರಾಣಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!