Sunday, May 19, 2024
spot_imgspot_img
spot_imgspot_img

ವಿಟ್ಲ: ಶ್ರೀ.ಕ್ಷೇ.ಧ.ಗ್ರಾ ಯೋಜನೆಯ 1556ನೇ ಮದ್ಯವರ್ಜನ ಶಿಬಿರ

- Advertisement -G L Acharya panikkar
- Advertisement -

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 1556ನೇ ಮದ್ಯವರ್ಜನ ಶಿಬಿರವು ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ – ಮಾಣಿಲದಲ್ಲಿ ನಡೆಯಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ಬೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ತಾಲೂಕು ಜನಜಾಗೃತಿ ವೇದಿಕೆ, ಬಂಟ್ವಾಳ 1556ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಮಾಣಿಲ ಕೇಪು ಗ್ರಾಮ ಪಂಚಾಯತು, ಮಾಣಿಲ, ಶ್ರೀ ಮಹಾಲಕ್ಷ್ಮಿ ಕ್ಷೇತ್ರ, ಶ್ರೀಧಾಮ – ಮಾಣಿಲ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮಾಣಿಲ, ಜಸ್ಟೀಸ್ ಕೆ. ಎಸ್. ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು, ನವಜೀವನ ಸಮಿತಿಗಳು, ವಿಟ್ಲ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ-ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 1556ನೇ ಮದ್ಯವರ್ಜನ ಶಿಬಿರ ನಡೆಯಲಿದೆ.

ದಿನಾಂಕ: 15-07-2022ರಿಂದ 22-07-2022ರವರೆಗೆ ಶ್ರೀ ಮಹಾಲಕ್ಷ್ಮಿ, ಕ್ಷೇತ್ರ, ಶ್ರೀ ಧಾಮ ಮಾಣಿಲದಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು 15-07-2022 ಶುಕ್ರವಾರ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮೋಹನದಾಸ ಪರಮಹಂಸ ಸ್ವಾಮಿಜಿ ಶ್ರೀ ಮಹಾಲಕ್ಷ್ಮಿ ಕ್ಷೇತ್ರ, ಶ್ರೀಧಾಮ ಮಾಣಿಲ ಇವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು 1556ನೇ ಮದ್ಯವರ್ಜನ ಶಿಬಿರ ಮಾಣಿಲ ಇದರ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ.ಕ್ಷೇ,ಧ,ಗ್ರಾ.ಯೋ, ದ.ಕ ಜಿಲ್ಲೆ 2 ಇದರ ನಿರ್ದೇಶಕ ಪ್ರವೀಣ್ ಕುಮಾರ್, ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷೇ ವನಿತಾ, ಬಂಟ್ವಾಳ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿಸೋಜ ಆಗಮಿಸಲಿದ್ದು, ಕೇಪು ಜನ ಜಾಗೃತಿ ವೇದಿಕೆಯ ವಲಯಾಧ್ಯಕ್ಷ ರಘುನಾಥ ಪಾತನಿಕೆ, ಕೇಪು ಪ್ರಗತಿ ಬಂಧು ಸ್ವ-ಸಹಾಯ ಸಂಘ ಒಕ್ಕೂಟದ ವಲಯಾಧ್ಯಕ್ಷ ಜಯಾನಂದ, ಮಾಣಿಲ ಪ್ರಗತಿ ಬಂಧು ಸ್ವ-ಸಹಾಯ ಸಂಘ ಒಕ್ಕೂಟದ ಅಧ್ಯಕ್ಷ ಆನಂದ ಬಂಗೇರ ಉಪಸ್ಥಿತರಿರಲಿದ್ದಾರೆ.

ದಿನಾಂಕ: 22-07-2022ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ ಹಾಗೂ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರುದೇವಾನಂದ ಸಂಸ್ಥಾನಂ, ಒಡಿಯೂರು ಆಶೀರ್ವಚನ ನೀಡಲಿದ್ದಾರೆ. ಈ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಎನ್ ಎ. ರಾಮಚಂದ್ರ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರಿನ ಶಾಸಕ ಸಂಜೀವ ಮಠಂದೂರು, ಉಡುಪಿಯ ಪ್ರಾದೇಶಿಕ ನಿರ್ದೇಶಕ ವಂಸತ ಸಾಲ್ಯಾನ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಕೃಷ್ಣಯ್ಯ ಕೆ ವಿಟ್ಲ ಅರಮನೆ, ಬಂಟ್ವಾಳ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಬಾಲಕೃಷ್ಣ ಕೊಡಾಜೆ, ಮಾಣಿಲ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ರಾಜೇಶ್ ಬಾಳೆಕಲ್ಲು ಆಗಮಿಸಲಿದ್ದಾರೆ.

- Advertisement -

Related news

error: Content is protected !!