Thursday, April 25, 2024
spot_imgspot_img
spot_imgspot_img

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವೈಭವದ ಮಹಾರಥೋತ್ಸವ; ಹರಿದು ಬಂದ ಭಕ್ತ ಸಾಗರ

- Advertisement -G L Acharya panikkar
- Advertisement -
vtv vitla

ವಿಟ್ಲ : ಇತಿಹಾಸ ಪ್ರಸಿದ್ದ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ಜ.21ರಂದು ರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು.

ರಾತ್ರಿ ಕಡಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರ ಕ್ಕೆ ಆಗಮಿಸಿದ ಬಳಿಕ ರಥೋತ್ಸವ ಆರಂಭಗೊಂಡಿತು. ಈ ವೇಳೆ ಆಕರ್ಷಕ ಸಿಡಿಮದ್ದು ಪ್ರ ದರ್ಶನ ನಡೆಯಿತು. ಊರ ಪರವೂರ ಸಾವಿರಾರು ಭಕ್ತಾದಿಗಳು ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು. ರಥೋತ್ಸವದ ಬಳಿಕ ದೇವರ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಿತು.

ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನ ಬಲಿ, ರಾಜಾಂಗಣದ ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಿತು. ನೂರಾರು ಭಕ್ತಾದಿಗಳು ಅನ್ನ ಪ್ರಸಾದ ಸ್ವೀಕರಿಸಿದರು. ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಊರ-ಪರವೂರಿನ ಸಾವಿರಾರು ಭಕ್ತಾದಿಗಳು ಬೆಳಿಗ್ಗಿನಿಂದಲೇ ದೇವಾಲಯಕ್ಕೆ ಆಗಮಿಸಲಾರಂಭಿಸಿದರು.

- Advertisement -

Related news

error: Content is protected !!