Friday, March 29, 2024
spot_imgspot_img
spot_imgspot_img

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಇದರ ದಶಮಾನೋತ್ಸವದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಕಾಯಾಗ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಸಭೆ

- Advertisement -G L Acharya panikkar
- Advertisement -

ವಿಟ್ಲ: ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ -ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಶುಭಾಶೀರ್ವಾದಗಳೊಂದಿಗೆ, ಕುಂಡಡ್ಕ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಉಪ ಸಮಿತಿಗಳ ಸಹಯೋಗದೊಂದಿಗೆ ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಇದರ ದಶಮಾನೋತ್ಸವದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಕಾಯಾಗ, ವಿಷ್ಣುಮೂರ್ತಿ ದೇವರಿಗೆ ಲಕ್ಷ ತುಳಸೀ ಅರ್ಚನೆ ಮತ್ತು ಪುಂಡಿ ಪಣವು ಸಮರ್ಪಣೆ ದಿನಾಂಕ 06-11-2022ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಹಾಗೂ ಸಭೆ ಇಂದು ಗಣ್ಯರ ಸಮ್ಮುಖದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ ಇದರ ಆಡಳಿತ ಸಮಿತಿ ಅಧ್ಯಕ್ಷ ದಯಾನಂದ ಉಜಿರೆಮಾರ್, ವಿಟ್ಲ-ಪಡ್ನೂರು ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ನಾಯಕ್ ನಾಟೆಕಲ್, ವೇಣುಗೋಪಾಲ್ ಮರುವಾಲ, ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ ಇದರ ಆಡಳಿತ ಸಮಿತಿ ಕಾರ್ಯದರ್ಶಿ ಗೋವಿಂದ್ ರಾಜ್, ಇಡ್ಕಿದು ಗ್ರಾಮ ಪಂಚಾಯತ್ ಸದಸ್ಯ ಚಿದಾನಂದ ಪೆಲತ್ತಿಂಜ, ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಇದರ ಅಧ್ಯಕ್ಷ ಯತೀಶ್ ಹಡೀಲು, ಇಡ್ಕಿದು ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ್ ಬರೆ ಹಾಗೂ ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಪದಾದಿಕಾರಿಗಳು ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ದಿನಾಂಕ 06-11-2022ರಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವೇ| ಮೂ| ಬ್ರಹ್ಮಶ್ರೀ ಕುಂಟುಕುಡೇಲು ರಘುರಾಮ ತಂತ್ರಿಯವರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಕಾಯಾಗ, ಲಕ್ಷ ತುಳಸೀ ಅರ್ಚನೆ ಮತ್ತು ಪುಂಡಿ ಪಣವು ಸಮರ್ಪಣೆ ನಡೆಯಲಿದೆ.

- Advertisement -

Related news

error: Content is protected !!