Friday, April 19, 2024
spot_imgspot_img
spot_imgspot_img

ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಅ.ಹಿ.ಪ್ರಾ.ಶಾಲೆ ವಾಣಿವಿಹಾರ ಅಳಿಕೆಯಲ್ಲಿ ಅದ್ದೂರಿಯಾಗಿ ನಡೆದ ಶಾಲಾವಾರ್ಷಿಕೋತ್ಸವ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಅನುದಾನಿತ ಹಿ.ಪ್ರಾ.ಶಾಲೆ ವಾಣಿವಿಹಾರ ಅಳಿಕೆ ಇದರ ವಾರ್ಷಿಕೋತ್ಸವವು ಪ್ರತಿಭಾ ಪುರಸ್ಕಾರ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಭೆಯ ಸಭಾಧ್ಯಕ್ಷತೆಯನ್ನು ಕೆ ಎಸ್ ಕೃಷ್ಣಭಟ್ ಮ್ಯಾನೇಜಿಂಗ್ ಟ್ರಸ್ಟಿ, ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಳಿಕೆ ಇವರು ವಹಿಸುವುದರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಶ್ರೀಪಾದ ಜಿ. ಮೆಹಂದಲೆ ಪ್ರೊಫೆಸರ್,ಕೆ.ಎಸ್.ಎಚ್.ಇ. ಎಂ. ದೇರಳಕಟ್ಟೆ ಇವರು ಮಕ್ಕಳಿಗೆ ಬಹುಮಾನ ನೀಡಿ ದಿಕ್ಸೂಚಿ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖಾವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಈ ಶಾಲೆಯ ಹಳೆ ವಿದ್ಯಾರ್ಥಿ ಚಿಂತನ್ ಕೆ ಇವರನ್ನು ಶಾಲಾವತಿಯಿಂದ ಸನ್ಮಾನಿಸಲಾಯಿತು.ಸಭೆಯಲ್ಲಿ ಜೆಡ್ಡು ನಾರಾಯಣ ಭಟ್ ನಿವೃತ್ತ ಮುಖ್ಯ ಶಿಕ್ಷಕರು ಪ್ರಾಥಮಿಕ ಶಾಲೆ ಅಳಿಕೆ, ಪದ್ಮನಾಭ ಭಟ್ ನಿವೃತ್ತ ಅಧ್ಯಾಪಕರು ಪ್ರೌಢ ಶಾಲೆ ಅಳಿಕೆ, ಎಸ್ ಚಂದ್ರಶೇಖರ ಭಟ್ ಕಾರ್ಯದರ್ಶಿಗಳು ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಅಳಿಕೆ, ಜನಾರ್ದನ ನಾಯಕ್ ಆಡಳಿತಾಧಿಕಾರಿಗಳು ಸತ್ಯಸಾಯಿ ವಿದ್ಯಾಸಂಸ್ಥೆಗಳು ಅಳಿಕೆ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಗೈದು, ಮುಖ್ಯ ಶಿಕ್ಷಕ ಈಶ್ವರ ನಾಯ್ಕ ಎಸ್ ಶಾಲಾವರದಿ ವಾಚನ ಮತ್ತು ಧನ್ಯವಾದಗೈದರು. ದೈಹಿಕ ಶಿಕ್ಷಣ ಶಿಕ್ಷಕ ರಾಜೇಂದ್ರ ರೈ ಸ್ವಾಗತ ಮಾಡಿದರು, ಶಿಕ್ಷಕರಾದ ಪ್ರವೀಣ್ ಶೆಟ್ಟಿ ನಿರೂಪಿಸಿದರು.

- Advertisement -

Related news

error: Content is protected !!