Thursday, April 25, 2024
spot_imgspot_img
spot_imgspot_img

ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ಸುಜಯ್.ಬಿ ರಾಜ್ಯಕ್ಕೆ ಪ್ರಥಮ

- Advertisement -G L Acharya panikkar
- Advertisement -

ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ 2021-22 ನೇ ಸಾಲಿನ SSLC ಪರೀಕ್ಷೆಯಲ್ಲಿ ಶಾಲೆಯು 98.08% ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 208 ವಿದ್ಯಾರ್ಥಿಗಳಲ್ಲಿ 204 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಆಗಿದ್ದಾರೆ.

ವಿದ್ಯಾರ್ಥಿ ಸುಜಯ್.ಬಿ ಇವರು 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ವಿಜಯ ಕುಮಾರ್ ಇವರು 624 ಇವರು 624 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿನೋದ್ ಕುಮಾರ್ ರೆಡ್ಡಿ 623 ಅಂಕಗಳನ್ನು ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿರುತ್ತಾರೆ.

ಪರೀಕ್ಷೆಗೆ ಹಾಜರಾದವರಲ್ಲಿ 118 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 78 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿಯೂ, 8 ಮಂದಿ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯನ್ನು ಪಡೆದಿರುತ್ತಾರೆ.

ಇವರ ಸಾಧನೆಗೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢ ಶಾಲೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!