Saturday, April 27, 2024
spot_imgspot_img
spot_imgspot_img

ವಿಟ್ಲ: ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಚಾಲನೆ- ಎಸ್. ಎಸ್. ಎಲ್ ಸಿ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಶಾಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಚಾಲನೆ ಹಾಗೂ 2021-22 ನೇ ಸಾಲಿನ 10 ನೇ ತರಗತಿ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಕಾರ್ಯಕ್ರಮ ನಡೆಯಿತು.

ಶಾಸಕ ಸಂಜೀವ ಮಠಂದೂರು ಶಾಲೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.

ಬಳಿಕ ಶಾಸಕ ಸಂಜೀವ ಮಠಂದೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಗುರೂಜಿ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರ ಕುಕ್ಕಾಜೆ ಇವರು ದೀಪ ಪ್ರಜ್ವಲಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸರಕಾರಿ ಪ್ರೌಢ ಶಾಲೆ ಮಾಣಿಲ ಮುಖ್ಯ್ಯೊಪಾಧ್ಯಾಯರಾದ ಸುಬ್ರಹ್ಮಣ್ಯ ಭಟ್ ಇವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ವಹಿಸಿಕೊಂಡ ಶಾಸಕ ಸಂಜೀವ ಮಠಂದೂರು ಮಾತನಾಡಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ನಾವೆಲ್ಲರೂ ದೇಶ ಭಕ್ತಿಯೊಂದಿಗೆ ಆಚರಿಸೋಣ. ಈ ಮೂಲಕ ಪ್ರತಿಯೊಬ್ಬನಲ್ಲಿ ದೇಶ ಪ್ರೇಮವನ್ನು ಬೆಳೆಸೋಣ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಲಯನ್ ಸತೀಶ್ ಕುಮಾರ್ ಆಳ್ವ ಇರಾ – ಬಾಳಿಕೆ ಉದ್ಯಮಿ ವಿಟ್ಲ, ಮಹಾಬಲ ಭಟ್ ಮುರುವ ಶಾಲಾ ಸ್ಥಳ ದಾನಿ, ಡಾ. ಬದ್ರುದ್ಧಿನ್ ಎಂ. ಎನ್. ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ, ವನಿತ ಅಧ್ಯಕ್ಷರು ಮಾಣಿಲ ಗ್ರಾಮ ಪಂಚಾಯತ್, ಬಾಲಕೃಷ್ಣ ಪೂಜಾರಿ ಅಧ್ಯಕ್ಷರು ಪೆರುವಾಯಿ ಗ್ರಾಮ ಪಂಚಾಯತ್, ಸರಸ್ವತಿ ಅಧ್ಯಕ್ಷರು ಅಳಿಕೆ ಗ್ರಾಮ ಪಂಚಾಯತ್, ಶಿವಪ್ರಸಾದ್ ಸೂರಂಪಳ್ಳ ಅಧ್ಯಕ್ಷರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ರಾಜೇಶ್ ಕುಮಾರ್ ಬಾಳೆಕಾಲ್ಲು ಉಪಾಧ್ಯಕ್ಷರು ಮಾಣಿಲ ಗ್ರಾಮ ಪಂಚಾಯತ್, ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಶ್ರೀ ಕೃಷ್ಣ, ಕೆ. ಜಿ ಸುಬ್ರಹ್ಮಣ್ಯ ಭಟ್ ಮುಖ್ಯ್ಯೊಪಾಧ್ಯಾಯರು ಸರಕಾರಿ ಪ್ರೌಢ ಶಾಲೆ ಮಾಣಿಲ, ಚಂದ್ರಶೇಖರ ಪಕಳಕುಂಜ ಮಾಣಿಲ ಗ್ರಾಮ ಪಂಚಾಯತ್ ಸದಸ್ಯ, ಗೀತಾನಂದ ಶೆಟ್ಟಿ ಮಾಣಿಲ ಗುತ್ತು ಅಧ್ಯಕ್ಷರು ವ್ಯವಸಾಯ ಸೇವಾ ಸಹಕಾರಿ ಸಂಘ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

vtv vitla

- Advertisement -

Related news

error: Content is protected !!