Friday, March 29, 2024
spot_imgspot_img
spot_imgspot_img

ವಿಟ್ಲ ಸರ್ಕಾರಿ ಆಸ್ಪತ್ರೆಯ ಕ್ಲರ್ಕ್ ವಿರುದ್ಧ ದೂರು- ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ !!

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಕ್ಲರ್ಕ್ ಕರ್ತವ್ಯದ ಮೇರೆಗೆ ಆಗಮಿಸಿದ ಶ್ರವಣ ತಪಾಸಣಾ ಶಿಬಿರದ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.

ಈ ಬಗ್ಗೆ ಕ್ಲರ್ಕ್ ವಿರುದ್ಧ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯ ಮೂಲಕ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ದೂರು ನೀಡಲಾಗಿದೆ.

ಆರೋಗ್ಯ ಕೇಂದ್ರದಲ್ಲಿ ಕ್ಲರ್ಕ್ ಕೆಲಸ ನಿರ್ವಹಿಸುವ ಫೌಲ್ ಮಸ್ಕರೇನಿಯಸ್ ಎಂಬವರು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ದಕ್ಷಿಣ ಕನ್ನಡ ಎನ್.ಪಿ.ಪಿ.ಸಿ.ಡಿ ಕಾರ್ಯಕ್ರಮದ ಶೋಭಿತಾ, ಕಾವ್ಯಶ್ರೀ ರವರು ದೂರು ನೀಡಿದ್ದಾರೆ.

ಸಮುದಾಯ ಆರೋಗ್ಯ ಕೆಂದ್ರದ ವೈಧ್ಯಾಧಿಕಾರಿಗಳನ್ನು ನಿರ್ಲಕ್ಷಿಸಿ ಆಸ್ಪತ್ರೆ ಸಂಪೂರ್ಣ ತನ್ನ ಸುಪರ್ದಿಯಲ್ಲಿ ಇರುವಂತೆ ನಡೆದುಕೊಳ್ಳುವ ಜೊತೆಗೆ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರನ್ನು, ವಾಹನ ಚಾಲಕರನ್ನು, ಅಗತ್ಯ ದುರಸ್ಥಿ ಕಾರ್ಯಕ್ಕೆ ತೆರಲಿದ ಸಿಬ್ಬಂದಿಗಳ ಜತೆಗೂ ಈ ಹಿಂದೆ ದರ್ಪ ತೋರಿದ ಘಟನೆ ನಡೆದಿದೆ.

ಒಬ್ಬ ಸಿಬ್ಬಂದಿಯಿಂದ ಸಾರ್ವಜನಿಕರಿಗೆ ಸಿಗುವ ಸವಲತ್ತುಗಳೂ ಸರಿಯಾಗಿ ಸಿಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಸೂಕ್ತ ತನಿಖೆಯನ್ನು ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

- Advertisement -

Related news

error: Content is protected !!