Thursday, July 30, 2026
spot_imgspot_img
spot_imgspot_img

ವಿಟ್ಲ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮತ್ತು ಸ್ಮಾರ್ಟ್ ತರಗತಿ ಉದ್ಘಾಟನಾ ಸಮಾರಂಭ

- Advertisement -
- Advertisement -

ವಿಟ್ಲ: ಸರ್ಕಾರಿ ಪ್ರಮಮ ದರ್ಜೆ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣಾ ಮತ್ತು ಸ್ಮಾರ್ಟ್ ತರಗತಿ ಉದ್ಘಾಟನಾ ಸಮಾರಂಭ ಬುಧವಾರ ನಡೆಯಿತು.

ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಮಾತನಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಜಗತ್ತಿನ ನಡುವೆ ಭಾರತ ಬೆಳಗಬೇಕಾದರೆ ಅತ್ಯಾಧುನಿಕ ತಾಂತ್ರಿಕತೆಯ ಬಗ್ಗೆ ಮಾಹಿತಿ ಅಗತ್ಯವಾಗಿದೆ.

ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಬದಲಾವಣೆಗೆ ವಿವಿಧ ಹಾಕಿಕೊಂಡಿದೆ. ಸರ್ಕಾರ ನೀಡುತ್ತಿರುವ ಟ್ಯಾಬ್ ಗಳನ್ನು ಶಿಕ್ಷಣಕ್ಕೆ ಪೂರಕವಾಗಿ ಸದ್ವಿನಿಯೋಗಪಡಿಸಬೇಕು.‌ ಉತ್ತಮ ಆರೋಗ್ಯದೊಂದಿಗೆ ಶಿಕ್ಷಣ ಮೇಲುಗೈ ಸಾಧಿಸುತ್ತಿದೆ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಉಪಾಧ್ಯಕ್ಷೆ ಉಷಾ ಕೃಷ್ಣಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಕಲ್ಲಕಟ್ಟ, ಕಾಲೇಜು ಪ್ರಾಂಶುಪಾಲೆ ಡಾ.ಶ್ರೀಜಾ ಉಪಸ್ಥಿತರಿದ್ದರು.

- Advertisement -

Related news

error: Content is protected !!