Tuesday, March 19, 2024
spot_imgspot_img
spot_imgspot_img

ವಿಟ್ಲ: ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ 6, 7, ಮತ್ತು 8ನೇ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

- Advertisement -G L Acharya panikkar
- Advertisement -

ವೀರಕಂಭ: ಸರಕಾರವು ತಿಳಿಸಿದ ಕೋರೋಣ ನೀತಿ-ನಿಯಮಗಳನ್ನು ಪಾಲಿಸಿಕೊಂಡು ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವು ಲಭಿಸಲು ಶಾಲಾಭಿವೃದ್ಧಿ ಸಮಿತಿಯ ದತ್ತು ಸಂಸ್ಥೆಯೊಂದಿಗೆ ಪೂರ್ಣ ಸಹಕರಿಸಬೇಕೆಂದು ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥ ಶ್ರೀ ಮಾತ ಡೆವಲಪ್ಪರ್ಸ್ ಸುರತ್ಕಲ್ ಇದರ ಮಾಲಕ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟುರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ 6, 7, ಮತ್ತು 8ನೇ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯಾರು ಒಬ್ಬರು ಮಾಡುವ ತಪ್ಪಿನಿಂದಾಗಿ ಒಮ್ಮೆ ಆರಂಭವಾದ ಶಾಲೆಗಳು ವಾಪಸ್ ಬಂದು ಆಗುವ ಪರಿಸ್ಥಿತಿ ಬರಬಾರದು. ಅದಕ್ಕಾಗಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ತಮ್ಮ ತಮ್ಮ ಸುತ್ತಮುತ್ತಲಿನ ಪ್ರದೇಶದ ಮಕ್ಕಳನ್ನು ಗಮನಿಸುತ್ತಾ ಇರಬೇಕು ಯಾರಿಗಾದರೂ ರೋಗಲಕ್ಷಣಗಳು ಇದ್ದರೆ ಅಂತವರನ್ನು ಪೂರ್ತಿ ಗುಣಮುಖ ಆಗುವವರೆಗೆ ಶಾಲೆಗೆ ಬರದಂತೆ ಪೋಷಕರಿಗೆ ಮನವರಿಕೆ ಮಾಡಬೇಕೆಂದು ತಿಳಿಸಿದರು.

ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಮಕ್ಕಳನ್ನು ಆರತಿ ಬೆಳಗಿ, ಪನ್ನೀರು ಹೂ ಸಿಂಪಡಿಸಿ ಶಾಲೆಗೆ ಬರಮಾಡಿಕೊಂಡರು. ಶಾಲಾ ವತಿಯಿಂದ ಮಕ್ಕಳಿಗೆ ಬರೆಯಲು ಪೆನ್ನು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದ ಎಲ್ಲಾ ಮಕ್ಕಳಿಗೆ ಉಚಿತವಾಗಿ ಮಾಸ್ಕ್ ನೀಡಿದರು.

ಈ ಸಂದರ್ಭದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ದಿನೇಶ್, ವಿಟ್ಲ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿರ್ದೇಶಕ ವಿಶ್ವನಾಥ ಎಂ ,ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವೀರಕಂಭ ಒಕ್ಕೂಟ ಅಧ್ಯಕ್ಷ ಕೊರಗಪ್ಪ ನಾಯ್ಕ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ, ಉಪಾಧ್ಯಕ್ಷೆ ಶ್ರೀಮತಿ ವಿಜಯ ಶೇಖರ್, ಹಾಗೂ ಸಮಿತಿ ಸದಸ್ಯರು ಮಕ್ಕಳ ಪೋಷಕರು ಉಪಸ್ಥಿತರಿದ್ದರು

ಶಾಲಾ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗಳು ಸೇರಿ ಶಾಲಾ ಪ್ರಾರಂಭೋತ್ಸವ ಪೂರ್ವ ತಯಾರಿಯಾಗಿ ಶಾಲೆಯನ್ನು ಸ್ವಚ್ಛಗೊಳಿಸಿದರು. ಸಾಮಾಜಿಕ ಅಂತರ ಕಾಪಾಡಲು ಶಾಲಾ ಆವರಣಕ್ಕೆ ಅಂತರ ಚೌಕಳಿ ಮಾಡಲಾಗಿತ್ತು. ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪೂರ್ತಿ ಶಾಲೆಗೆ ಸ್ಯಾನಿಟೈಸರ್ ಮಾಡಲಾಗಿತ್ತು. ಶಾಲಾಭಿವೃದ್ಧಿ ಸಮಿತಿಯು ಶಾಲೆಯನ್ನು ತಳಿರು-ತೋರಣಗಳಿಂದ ಅಲಂಕರಿಸಿದ್ದರು. ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು. ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿ ಶಿಕ್ಷಕಿ ಸಂಗೀತ ಶರ್ಮ ವಂದಿಸಿದರು

driving
- Advertisement -

Related news

error: Content is protected !!