Saturday, May 11, 2024
spot_imgspot_img
spot_imgspot_img

ವಿಟ್ಲ: ಹೈಕೋರ್ಟ್ ವಿಶೇಷ ತೀರ್ಪು; ವೃದ್ದನಿಗೆ ಜೈಲು ಶಿಕ್ಷೆ ಬದಲು ಅಂಗನವಾಡಿಯಲ್ಲಿ ಕರ್ತವ್ಯ ಸಲ್ಲಿಸಲು ಆದೇಶ

- Advertisement -G L Acharya panikkar
- Advertisement -

ವಿಟ್ಲ: ಕರೋಪಾಡಿಯಲ್ಲಿ 2008ರಲ್ಲಿ ಜಾಗದ ವಿಚಾರದಲ್ಲಿ ನೆರೆಮನೆಯ ನರಸಿಂಹ ನಾಯಕ್‌ ಎಂಬವರಿಗೆ ಹಲ್ಲೆ ಮಾಡಿದ್ದರು.ಕಿನೀಡಿದ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ಮಾಡಿದ್ದರು. ಈ ಪ್ರಕರಣದಲ್ಲಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ವಿಧಿಸಿತ್ತು.

ತಪ್ಪು ಮಾಡಿದವರಿಗೆ ಸಾಮಾನ್ಯವಾಗಿ ನ್ಯಾಯಾಲಯ ಗರಿಷ್ಠ ಪ್ರಮಾಣದ ಶಿಕ್ಷೆ ಕೊಡುತ್ತದೆ. ಇಲ್ಲೊಬ್ಬರು ವೃದ್ದರು 15 ವರ್ಷಗಳ ಹಿಂದೆ ನೆರೆಮನೆಯ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಹೈಕೋರ್ಟ್ ಸ್ಪೆಷಲ್ ತೀರ್ಪೊಂದನ್ನು ನೀಡಿದೆ. ಹೈಕೋರ್ಟ್ ನೀಡಿರುವ ಈ ತೀರ್ಪು ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಅಪರಾಧ ಪ್ರಕರಣಗಳಲ್ಲಿ ತಪ್ಪು ಮಾಡಿದವರಿಗೆ ಗರಿಷ್ಠ ಶಿಕ್ಷೆ ಕೊಡಬೇಕೆಂದು ಕಾನೂನು ಹೇಳುತ್ತದೆ. ಆದರೆ ಜೈಲು ಕೈದಿಗಳಲ್ಲಿಯೂ ಸನ್ನಡತೆಗೆ ಮನ್ನಣೆ ಕೊಡುವುದು ನ್ಯಾಯಾಲಯದ ವಾಡಿಕೆ. ಈ 81 ವರ್ಷ ಪ್ರಾಯದ ವೃದ್ಧನ ಪಾಲಿಗೆ, ಹೈಕೋರ್ಟ್ ವಯಸ್ಸು, ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿ ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಹಚ್ಚಿದೆ. ಅದರಂತೆ, ವೃದ್ಧ ವ್ಯಕ್ತಿ ಕರೋಪಾಡಿ ಗ್ರಾಮದ ಮಿತ್ತನಡ್ಕದ ಅಂಗನವಾಡಿಯಲ್ಲಿ ಶುಚಿತ್ವದ ಕೆಲಸದಲ್ಲಿ ತೊಡಗಿದ್ದಾರೆ.

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕರದ್ದು ತೀರಾ ಬಡ ಕುಟುಂಬ. 2008ರಲ್ಲಿ ಜಾಗದ ವಿಚಾರದಲ್ಲಿ ಕಿರುಕುಳ ನೀಡಿದ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ಮಾಡಿದ್ದರು. ಪ್ರಕರಣದಲ್ಲಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ದಂಡ ವಿಧಿಸಿತ್ತು. ಆದರೆ ದೂರುದಾರ ವ್ಯಕ್ತಿ ಆರೋಪಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕೆಂದು ಮಂಗಳೂರಿನ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 2014ರಲ್ಲಿ ಆರೋಪಿ ಐತಪ್ಪ ನಾಯ್ಕನಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ಕೊಟ್ಟಿತ್ತು.

ಮಂಗಳೂರಿನ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಐತಪ್ಪ ನಾಯ್ಕ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಮಕ್ಕಳಿಲ್ಲದ ವೃದ್ಧ ಮತ್ತು ಮನೆಯಲ್ಲಿ ಪತ್ನಿ ಒಬ್ಬಂಟಿಯಾಗಿರುವುದರಿಂದ, ವಯಸ್ಸನ್ನು ಸಹ ಪರಿಗಣಿಸಿ ಶಿಕ್ಷೆಗೆ ವಿನಾಯ್ತಿ ನೀಡಬೇಕೆಂದು ವಕೀಲರು ಕೋರಿದ್ದರು. ಆರೋಪಿ ಐತಪ್ಪ ನಾಯ್ಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಲ್ಲದೆ, ಪಶ್ಚಾತ್ತಾಪ ವ್ಯಕ್ತಪಡಿಸಿದ್ದರಿಂದ ನ್ಯಾಯಾಧೀಶರು ಕೆಳಗಿನ ಕೋರ್ಟಿನ ಶಿಕ್ಷೆಯನ್ನು ರದ್ದುಗೊಳಿಸಿದ್ದಾರೆ. ಅದರ ಬದಲಿಗೆ ಒಂದು ವರ್ಷ ಕಾಲ ಸ್ಥಳೀಯ ಅಂಗನವಾಡಿಯಲ್ಲಿ ವೇತನ ಇಲ್ಲದೆ ಸೇವೆ ಮಾಡುವಂತೆ ಆದೇಶ ಮಾಡಿದ್ದಾರೆ. ಅದರಂತೆ, ಕರೋಪಾಡಿ ಗ್ರಾಮದ ಮಿತ್ತನಡ್ಕ ಅಂಗನವಾಡಿಯಲ್ಲಿ ವೃದ್ಧ ಐತಪ್ಪ ನಾಯ್ಕ ಈಗ ಶುಚಿತ್ವದ ಕೆಲಸ ಆರಂಭಿಸಿದ್ದಾರೆ

- Advertisement -

Related news

error: Content is protected !!