Saturday, April 27, 2024
spot_imgspot_img
spot_imgspot_img

ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

- Advertisement -G L Acharya panikkar
- Advertisement -

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಡಿ.1 ರಂದು 2022- 23ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟ ನಡೆಯಿತು.

ಕ್ರೀಡಾಕೂಟವನ್ನು ರಾಷ್ಟ್ರಮಟ್ಟದ ಕ್ರೀಡಾಪಟು ಅಮಿತಾ ಕೆ ಸಾಲ್ಯಾನ್ ಉದ್ಘಾಟಿಸಿದರು. ಅವರು ಮಾತನಾಡಿ ಕ್ರೀಡೆಯಿಂದ ಆಗುವ ಪ್ರಯೋಜನಗಳನ್ನು ವಿವರಿಸುತ್ತಾ ತನ್ನ ಕ್ರೀಡಾ ದಿನಗಳ ಅನುಭವವನ್ನು ಹಂಚಿಕೊಂಡರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಲ್ ಎನ್ ಕೂಡೂರು ವಿದ್ಯಾರ್ಥಿಗಳ ಶಿಸ್ತು, ಚಟವಟಿಕೆಗಳನ್ನು ಕೊಂಡಾಡಿದರು.

ವಿದ್ಯಾರ್ಥಿಗಳು ತಮ್ಮ ತಂಡದ ಸಮವಸ್ತ್ರ ತೊಟ್ಟು ಶಿಕ್ಷಕರೊಂದಿಗೆ ಪಥಸಂಚಲನ ಮಾಡಿ ಕ್ರೀಡಾ ದಿನಕ್ಕೆ ಮೆರುಗು ನೀಡಿದರು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಧರ್ ಶೆಟ್ಟಿ, ಕೋಶಾಧಿಕಾರಿ ಪ್ರಭಾಕರ್ ಶೆಟ್ಟಿ, ಕಾರ್ಯದರ್ಶಿ ಮೋಹನ್ ಎ ಹಾಗೂ ನಿರ್ದೇಶಕರಾದ ವಿಜಯ ಪಾಯಸ್, ಆಡಳಿತಾಧಿಕಾರಿ ರಾಧಾಕೃಷ್ಣ ಎ, ಸಂಸ್ಥೆ, ಪ್ರಾಂಶುಪಾಲರಾದ ಜಯರಾಮ್ ರೈ ಹಾಗೂ ಉಪ ಪ್ರಾಂಶುಪಾಲೆ ಹೇಮಲತಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಶೇಕ್ ಝಕೀಯಾ ಕಾಸೀಮ್ ನಡೆಸಿಕೊಟ್ಟರು. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳೆಲ್ಲ ಸಕ್ರಿಯವಾಗಿ ಪಾಲ್ಗೊಂಡರು.

- Advertisement -

Related news

error: Content is protected !!