Sunday, May 19, 2024
spot_imgspot_img
spot_imgspot_img

ವಿದೇಶದಿಂದ ಬಂದವನ ಹೊಟ್ಟೆಯಲ್ಲಿತ್ತು ಮಾತ್ರೆ ರೂಪದ ಕೊಕೇನ್‌

- Advertisement -G L Acharya panikkar
- Advertisement -

ಗಿನಿಯಾದಿಂದ ಬೆಂಗಳೂರಿಗೆ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು 686 ಗ್ರಾಂ ಕೊಕೇನ್‌ ಜಪ್ತಿ ಮಾಡಿದ್ದಾರೆ.

ಆರೋಪಿಯು ಗಿನಿಯಾದಿಂದ ದುಬೈ ಮೂಲಕ ಬೆಂಗಳೂರಿಗೆ ‘ಇಕೆ-566’ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಕಸ್ಟಮ್ಸ್‌ ಅಧಿಕಾರಿಗಳು ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದರು. ಆಗ ಮಾತ್ರೆ ರೂಪದಲ್ಲಿ ಈತನ ದೇಹದೊಳಗೆ ಮಾದಕವಸ್ತು ಇರುವುದು ಪತ್ತೆಯಾಗಿದೆ. ಕೂಡಲೇ ಆತನನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡಿದಾಗ ಮಾತ್ರೆ ರೂಪದಲ್ಲಿ 686 ಗ್ರಾಂ ಕೊಕೇನ್‌ ಪತ್ತೆಯಾಗಿದೆ.

ಆರೋಪಿಯ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯದ ಸೂಚನೆ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಕಸ್ಟಮ್ಸ್‌ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!