Saturday, April 20, 2024
spot_imgspot_img
spot_imgspot_img

ವಿದ್ಯಾರ್ಥಿನಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಶಿಕ್ಷಕಿ

- Advertisement -G L Acharya panikkar
- Advertisement -

ಜೈಪುರ: ಪ್ರೀತಿಯೊಂದು ಮಾಯೆ.. ಪ್ರೀತಿಗೆ ಕಣ್ಣಿಲ್ಲ ಅನ್ನೋದಕ್ಕೆ ರಾಜಸ್ಥಾನದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ರಾಜಸ್ಥಾನದ ಭರತ್‌ಪುರದ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗ ಬೇಕೆಂಬ ಹಂಬಲದಿಂದ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.

ಪುರುಷನಾಗಿ ಬದಲಾಗಿರುವ ಶಿಕ್ಷಕ ಆರವ್ ಕುಂತಲ್ . ನಾನೂ ಶಸ್ತ್ರಚಿಕಿತ್ಸೆಗೆ ಒಳಗಾಗಲು ಬಯಸಿದ್ದೆ. 2019ರ ಡಿಸೆಂಬರ್‌ನಲ್ಲಿ ನನ್ನ ಮೊದಲ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡೆ. ಇತ್ತೀಚೆಗೆ ಮತ್ತೊಮ್ಮೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಾಯಿತು ಎಂದು ಹೇಳಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ತನ್ನ ವಿದ್ಯಾರ್ಥಿನಿಯನ್ನೇ ಪ್ರೀತಿಸಿ ಮದುವೆಯಾಗಿದ್ದಾರೆ.

ಇನ್ನೂ ಪುರುಷನಾಗಿ ಬದಲಾದ ಶಿಕ್ಷಕಿಯನ್ನು ಮದುವೆಯಾದ ಯುವತಿ ಪ್ರತಿಕ್ರಿಯಿಸಿ, ನಾನು ಮೊದಲಿನಿಂದಲೂ ಅವರನ್ನು ಪ್ರೀತಿಸುತ್ತಿದ್ದೆ. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಾಗ ನಾನೂ ಅವರೊಂದಿಗೆ ಇದ್ದೆ. ಈ ಸರ್ಜರಿ ಮಾಡಿಸಿಕೊಳ್ಳದೇ ಇದ್ದಿದ್ದರೂ ನಾನು ಅವರನ್ನು ಮದುವೆಯಾಗುತ್ತಿದ್ದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!