Sunday, June 7, 2026
spot_imgspot_img
spot_imgspot_img

ವಿಲೇಜ್ ಅಕೌಂಟೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!!

- Advertisement -
- Advertisement -

ಬೆಂಗಳೂರು: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನ ಆನೆಕಲ್‌ನಲ್ಲಿ ನಡೆದಿದೆ.

ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಅಲಿಯಾ ಅಂಜುಂ ಅಣ್ಣಿಗೇರಿ (22) ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಮೂಲದ ಯುವತಿ, ಸರ್ಜಾಪುರ ನಾಡ ಕಚೇರಿಯಲ್ಲಿ ವಿಲೇಜ್ ಅಕೌಂಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಳು. ಇನ್ನು ಇವರು ಆನೇಕಲ್ ಪಟ್ಟಣದ ಪೊಲೀಸ್ ಠಾಣೆ ಸಮೀಪದ ಮುನಿವೀರಪ್ಪ ಗಲ್ಲಿಯಲ್ಲಿ ಶ್ರೀನಿವಾಸ್ ರೆಡ್ಡಿ ಎಂಬುವವರ ಕಟ್ಟಡದಲ್ಲಿ ಬಾಡಿಗೆ ಮನೆಯನ್ನು ಮಾಡಿಕೊಂಡು ವಾಸವಾಗಿದ್ದರು. ಇನ್ನು ತಂದೆ- ತಾಯಿ ಊರಿನಲ್ಲಿ ವಾಸವಾಗಿದ್ದಾರೆ. ಅಣ್ಣ ಹಾಗೂ ತಂಗಿ ಇಬ್ಬರೇ ಬೆಂಗಳೂರಿನಲ್ಲಿ ಮನೆ ಮಾಡಿಕೊಂಡು ವಾಸವಿದ್ದರು.

ಸರ್ಜಾಪುರದಲ್ಲಿ ತಂಗಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಹಿನ್ನೆಲೆಯಲ್ಲಿ ಆಕೆಯ ಮದುವೆ ಆಗುವವರೆಗೂ ಜೊತೆಯಲ್ಲಿರುವ ಉದ್ದೇಶದಿಂದ ಅಣ್ಣನೂ ಕೂಡ ತಂಗಿಯೊಂದಿಗೆ ಬಂದು ಆನೇಕಲ್ ಪಟ್ಟಣದಲ್ಲಿ ಪ್ರತ್ಯೇಕವಾಗಿ ಮನೆ ಮಾಡಿಕೊಂಡು ವಾಸವಾಗಿದ್ದರು. ಆದರೆ, ಯಾವುದೇ ಕಾರ್ಯ ನಿಮಿತ್ತ ಅಲಿಯಾ ಅಂಜುಂ ಅವರ ಅಣ್ಣ, ಬಳ್ಳಾರಿಯ ಗ್ರಾಮಕ್ಕೆ ಹೋಗಿದ್ದನು. ಭಾನುವಾರ ರಜಾ ದಿನವಾದ್ದರಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಒಬ್ಬಳೇ ಇರುವಾಗ ಫ್ಯಾನಿಗೆ ಸೀರೆಯನ್ನು ಬಿಗಿದು ನೇಣಿಗೆ ಶರಣಾಗಿದ್ದಾಳೆ.

ಈ ಘಟನೆ ಕುರಿತು ಕಟ್ಟಡದ ಮಾಲೀಕರು ಆನೇಕಲ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯ ಮೃತದೇಹ ಮತ್ತು ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ. ಆದರೆ, ಯುವತಿ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ತಿಳಿದುಬಂದಿಲ್ಲ. ಇನ್ನು ಅಣ್ಣನೂ ಕೂಡ ಊರಿಗೆ ಹೋಗಿದ್ದು, ಮನೆಯವರಿಗೆ ವಿಚಾರ ತಿಳಿಸಲಾಗಿದೆ. ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಸಾವಿಗೆ ಕಾರಣ ತಿಳಿದುಬರಲಿದೆ.

- Advertisement -

Related news

error: Content is protected !!