Saturday, April 20, 2024
spot_imgspot_img
spot_imgspot_img

ವಿವಾದಿತ ಕೃಷಿ ಕಾಯ್ದೆಗಳು ರದ್ದು – ಪ್ರಧಾನಿ ನರೇಂದ್ರ ಮೋದಿ ಘೋಷಣೆ

- Advertisement -G L Acharya panikkar
- Advertisement -

vtv vitla
vtv vitla

ನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದು ಪಡಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.ಈ ಕಾಯ್ದೆಗಳನ್ನು ವಿರೋಧಿಸಿ ಸುಮಾರು ಒಂದು ವರ್ಷದಿಂದ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿ ಭಾಗಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ

ಇಂದು ಈ ಬಗ್ಗೆ ಘೋಷಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಮೂರು ಕೃಷಿ ಕಾಯ್ದೆಗಳ ಮೂಲಕ ಸರ್ಕಾರವು ಸಣ್ಣ ರೈತರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡಿತ್ತು. ಅವರು ಬೆಳೆಯುವ ಬೆಳೆಗೆ ಒಳ್ಳೆಯ ಬೆಲೆ ಸಿಗುವಂತೆ ಮಾಡಲು ಉದ್ದೇಶಿಸಲಾಗಿತ್ತು. ರೈತರು ಮತ್ತು ಕೃಷಿ ವಿಜ್ಞಾನಿಗಳು ಈ ಕಾಯ್ದೆಗಳಿಗಾಗಿ ಹಲವು ವರ್ಷಗಳಿಂದ ಕೇಳುತ್ತಿದ್ದರು. ಹಲವು ಸರ್ಕಾರಗಳು ಈ ಕಾಯ್ದೆಯನ್ನು ತರುವ ಬಗ್ಗೆ ಆಲೋಚಿಸುತ್ತಿದ್ದವು, ಆದರೆ ನಾವು ಕಾಯ್ದೆಯನ್ನು ಜಾರಿಗೆ ತಂದೆವು. ಕೋಟ್ಯಂತರ ರೈತರು ಈ ಮೂರೂ ಕೃಷಿ ಕಾಯ್ದೆಗಳನ್ನು ಸ್ವಾಗತಿಸಿದರು ಹಾಗೂ ಬೆಂಬಲ ನೀಡಿದರು. ಆ ಎಲ್ಲರಿಗೂ ನನ್ನ ಧನ್ಯವಾದಗಳು’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಕೃಷಿ ಕಾಯ್ದೆಗಳಿಂದ ಆಗುವ ಅನುಕೂಲಗಳ ಬಗ್ಗೆ ಒಂದು ಭಾಗದ ರೈತರ ಮನವೊಲಿಸಲು ನಮಗೆ ಸಾಧ್ಯವಾಗಲಿಲ್ಲ. ಹಲವು ವಿಜ್ಞಾನಿಗಳು ಮಾಧ್ಯಮಗಳ ಮೂಲಕ ಅವರಿಗೆ ವಿವರಿಸಲು ಪ್ರಯತ್ನಿಸಿದರು. ನಾವು ರೈತರ ಮಾತುಗಳನ್ನು ಆಲಿಸಲು, ಅವರ ವಿಚಾರಗಳನ್ನು ತಿಳಿಯಲು ಪ್ರಯತ್ನ ಮಾಡಿದೆವು. ಆದರೆ, ಒಂದು ಭಾಗದ ರೈತರಿಗೆ ಅದನ್ನು ಅರ್ಥ ಮಾಡಿಸಲು ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದರು.

vtv vitla
- Advertisement -

Related news

error: Content is protected !!