Wednesday, May 8, 2024
spot_imgspot_img
spot_imgspot_img

ವಿವಿಧ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ – 68 ಮಂದಿ ಮತ್ತು 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

- Advertisement -G L Acharya panikkar
- Advertisement -

ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ. ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿವಿಧ ಸಾಧಕರ ಹೆಸರನ್ನು ಫೈನಲ್ ಮಾಡಲಾಗಿದೆ. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಶಸ್ತಿ ವಿಜೇತರು ಮತ್ತು ಪ್ರಶಸ್ತಿ ವಿಜೇತ ಸಂಘ ಸಂಸ್ಥೆಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.

ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಪ್ರಕಟಗೊಂಡಿದ್ದು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ನಾಡಿನ 68 ಮಂದಿ ಸಾಧಕರು, 10 ಸಂಘ-ಸಂಸ್ಥೆಗಳು ಪ್ರಶಸ್ತಿಗೆ ಆಯ್ಕೆಯಾಗಿವೆ.

- Advertisement -

Related news

error: Content is protected !!