Wednesday, May 1, 2024
spot_imgspot_img
spot_imgspot_img

ವೀರೇಂದ್ರ ಹೆಗ್ಗಡೆ ವಿರುದ್ಧ ಸುಳ್ಳು ಆರೋಪ ಪ್ರಕರಣ; ಶಿಕ್ಷೆಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್‌

- Advertisement -G L Acharya panikkar
- Advertisement -

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ ವಿರೇಂದ್ರ ಹೆಗಡೆ ಅವರ ವಿರುದ್ಧ ಹಾಗೂ ಕ್ಷೇತ್ರದ ಸಂಸ್ಥೆಗಳ ಗೌರವಕ್ಕೆ ತ್ಯುಚಿ ಬರುವಂತೆ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿ ಆ ಬಳಿಕವೂ ಸಾಮಾಜಿಕ ಜಾಲತಾಣಗಳಲ್ಲಿ ಹೆಗ್ಗಡೆ ವಿರುದ್ಧ ಆರೋಪಗಳನ್ನು ಮಾಡಿದ್ದ ಆರೋಪ ಸಾಬೀತಾಗಿ ದೋಷಿ ಎಂದು ಪರಿಗಣಿಸಿದೆ.

ಹಳೆ ಪ್ರಕರಣವೊಂದರಲ್ಲಿ ನೇರವಾಗಿ ಭಾಗಿಯಾದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ್ ನಾಯಕ್ ಅವರ ಮೇಲ್ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಮೂರು ತಿಂಗಳ ಸಜೆಯನ್ನು ಎತ್ತಿ ಹಿಡಿದಿದೆ.

ವೀರೇಂದ್ರ ಹೆಗ್ಗಡೆ ಹಾಗೂ ಕ್ಷೇತ್ರದ ಸಂಸ್ಥೆಗಳ ಗೌರವಕ್ಕೆ ಚ್ಯುತಿ ಬರುವಂತಹ ಹೇಳಿಕೆ ನೀಡಬಾರದು ಎಂದು ಬೆಳ್ತಂಗಡಿ ಜೆಎಂಎಫ್ ನ್ಯಾಯಾಲಯವು 2013ರ ನ.5ರಂದು ಸೋಮನಾಥ ನಾಯಕ್ ಮತ್ತು ಇತರ ಐವರ ವಿರುದ್ಧ ನಿರ್ಬಂಧ ಹೇರಿತ್ತು. ಆ ಬಳಿಕವೂ ನಾಯಕ್ ಸಾಮಾಜಿಕ ಜಾಲತಾಣಗಳಲ್ಲಿ ಹೆಗ್ಗಡೆ ವಿರುದ್ಧ ಆರೋಪಗಳನ್ನು ಮಾಡಿದ್ದರು. ಈ ಬಗ್ಗೆ ಹೆಗ್ಗಡೆ ಅವರು ದೂರು ನೀಡಿದ್ದರು.

ದೋಷಿಯ ಆಸ್ತಿಯನ್ನೂ ಮುಟ್ಟುಗೋಲು..!
ಹೆಗ್ಗಡೆ ನೀಡಿದ್ದ ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಸೋಮನಾಥ ನಾಯಕ್ ದೋಷಿ ಎಂದು ಪರಿಗಣಿಸಿ, ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು . ದೂರುದಾರರಿಗೆ ₹ 4.5 ಲಕ್ಷ ಪರಿಹಾರ ನೀಡಬೇಕು. ಇದಕ್ಕಾಗಿ ಆಸ್ತಿಯನ್ನೂ ಮುಟ್ಟುಗೋಲು ಹಾಕಬಹುದು ಎಂದು ಆದೇಶಿಸಿತ್ತು.

ಈ ತೀರ್ಪಿನ ವಿರುದ್ಧ ಸೋಮನಾಥ್ ನಾಯಕ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಬೆಳ್ತಂಗಡಿಯ ಜೆಎಂಎಫ್ಸಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು 2021 ಜೂನ್ 8ರಂದು ಕೆಳ ನ್ಯಾಯಾಲಯದ ತೀರ್ಪನ್ನು ಕಾಯಂಗೊಳಿಸಿ ತೀರ್ಪು ನೀಡಿದ್ದರು. ಅದರ ವಿರುದ್ಧವೂ ನಾಯಕ್ ಮೇಲ್ಮನವಿ ಸಲ್ಲಿಸಿದ್ದರು.

ಸುಪ್ರೀಂ ಕೋರ್ಟ್‌‌ನಲ್ಲೂ ಮನವಿ ತಿರಸ್ಕಾರ
ತೀರ್ಪನ್ನು ಪ್ರಶ್ನಿಸಿ ಕರ್ನಾಟಕದ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದ ನಾಯಕ್, ‘ತನ್ನನ್ನು ಬಂಧಿಸದಂತೆ ತಡೆಯಾಜ್ಞೆ ನೀಡಬೇಕು ಹಾಗೂ ವಿಚಾರಣಾ ನ್ಯಾಯಾಲಯದ ಆದೇಶ ವಜಾ ಮಾಡಬೇಕು‘ ಎಂದು ಕೋರಿದ್ದರು. ‘ವಿಚಾರಣಾ ನ್ಯಾಯಾಲಯಗಳ ಆದೇಶ ಸಮಂಜಸವಾಗಿದೆ. ಈ ಪ್ರಕರಣದ ಹೈಕೋರ್ಟ್
ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ’ ಎಂದು ಹೈಕೋರ್ಟ್ 2022ರಮೇ 5ರಂದು ತೀರ್ಪು ನೀಡಿತ್ತು.

ಇದನ್ನು ನಾಯಕ್ ಅವರು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಅವರ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಅ.19ರಂದು ತಿರಸ್ಕರಿಸಿದೆ.

- Advertisement -

Related news

error: Content is protected !!