Wednesday, June 17, 2026
spot_imgspot_img
spot_imgspot_img

ವೀರ ಸಾವರ್ಕರ್ ಸಿನಿಮಾ ನಿರ್ಮಾಪಕನಿಗೆ ಕೊಲೆ ಬೆದರಿಕೆ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಅವರು ಅಂಬೋಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಈಗಾಗಲೇ ಸಿನಿಮಾದ ಸಿದ್ಧತೆ ನಡೆಸಿದ್ದೇವೆ. ವೀರ ಸಾವರ್ಕರ್ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನೇನು ಶೂಟಿಂಗ್ ಗೆ ಹೊರಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಹಾಗಾಗಿ ತಮಗೆ ರಕ್ಷಣೆ ಬೇಕೆಂದು ಸಂದೀಪ್ ಸಿಂಗ್ ದೂರಿನಲ್ಲಿ ದಾಖಲಿಸಿದ್ದಾರೆ.

ಸಂದೀಪ್ ಸಿಂಗ್ ಅವರ ಫೇಸ್ ಬುಕ್ ನಲ್ಲಿ ಸಿಧು ಮೂಸೆವಾಲ ಹತ್ಯೆಯನ್ನು ನೆನಪಿಸಿಕೊಳ್ಳಿ. ಅದೇ ರೀತಿಯಲ್ಲೇ ನಿನ್ನನ್ನೂ ಕೊಲೆ ಮಾಡಲಾಗುವುದು. ಸ್ವಲ್ಪ ದಿನ ಕಾಯಿರಿ ಎಂದು ಸಂದೇಶವನ್ನು ಪೋಸ್ಟ್ ಮಾಡಿದ್ದಾರಂತೆ. ಇದು ಫೇಸ್ ಬುಕ್ ಮಸೇಜ್ ಮೂಲಕ ಬಂದ ಕೊಲೆ ಬೆದರಿಕೆ ಎಂದು ಸಿಂಗ್ ತಿಳಿಸಿದ್ದಾರೆ. ಈ ಪ್ರಕರಣವನ್ನೂ ಗಂಭೀರವಾಗಿ ಪೊಲೀಸ್ ಇಲಾಖೆ ತಗೆದುಕೊಂಡಿದ್ದು, ಈ ಸಂದೇಶವನ್ನು ಕಳುಹಿಸಿದ ವ್ಯಕ್ತಿಗಾಗಿ ಬಲೆ ಬೀಸಿದ್ದಾರಂತೆ.

- Advertisement -

Related news

error: Content is protected !!