Monday, June 8, 2026
spot_imgspot_img
spot_imgspot_img

ವೇಣೂರು: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -
vtv vitla

ವೇಣೂರು: ಗುಂಡೂರಿ ಗ್ರಾಮದ ಅಶೋಕ ನಗರ ನಿವಾಸಿ, ವೇಣೂರು ಸ.ಪ.ಪೂ. ಕಾಲೇಜು ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು. ಅಂಕಿತಾ (17) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ. 26ರಂದು ನಿಧನಹೊಂದಿದ್ದಾರೆ.

ಅಶೋಕ ಪೂಜಾರಿ ಮತ್ತು ಪ್ರತಿಮಾ ದಂಪತಿಯ ಪುತ್ರಿಯಾಗಿರುವ ಈಕೆ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅ. 22ರಂದು ಮಂಗಳೂರಿನ ಖಾಸಗಿ ಆಸ್ಪತ್ರಗೆ ಸಾಗಿಸಿ ಅಲ್ಲಿ ಚಿಕಿತ್ಸೆ ಮುಂದುವರಿಸಿದ್ದ ರ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಂಕಿತಾ ಇಹಲೋಕ ತ್ಯಜಿಸಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಈಕೆ ತಂದೆ – ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!