Monday, June 8, 2026
spot_imgspot_img
spot_imgspot_img

ಬೆಳ್ತಂಗಡಿ: ಮಹಿಳೆಯ ಕೈ-ಕಾಲು ಕಟ್ಟಿ ಹಾಕಿ ದರೋಡೆ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

- Advertisement -
- Advertisement -
vtv vitla

ಬೆಳ್ತಂಗಡಿ: ಒಂಟಿ ಮಹಿಳೆಯ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕರ ಮನೆಗೆ ಏಕಾಏಕಿ ಬಂದ ಮುಸುಕುಧಾರಿಗಳು ಅವರ ಬಾಯಿಗೆ ಬಟ್ಟೆ ತುರುಕಿಸಿ, ಹಗ್ಗದಿಂದ ಕೈಕಾಲನ್ನು ಕಟ್ಟಿ ಹಾಕಿ, ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಬೆಂಡೋಲೆಯನ್ನು ಬಲಾತ್ಕಾರವಾಗಿ ತೆಗೆದು ಬಳಿಕ ಮನೆಯೊಳಗಿದ್ದ 3 ಚಿನ್ನದ ಬಳೆಗಳು, 3 ಚಿನ್ನದ ಉಂಗುರಗಳು, ಚಿನ್ನದ ಚೈನ್ ಹಾಗೂ ಒಂದು ಮೊಬೈಲ್‌ನ್ನು ದೋಚಿ “ಎಂಕ್ಲು ಬತ್ತಿನಾ ಕೆಲಸ ಆಂಡ್” ಎಂದು ತುಳುವಿನಲ್ಲಿ ಹೇಳುತ್ತಲೇ ದರೋಡೆಕೋರರು ಪರಾರಿಯಾಗಿದ್ದಾರೆ.

ಆರೋಪಿತರು ದೋಚಿದ ಚಿನ್ನದ ಅಂದಾಜು ಮೌಲ್ಯ ಒಟ್ಟು ರೂ. 4,60,000 ಆಗಬಹುದೆಂದು ಅಂದಾಜಿಸಲಾಗಿದೆ. ವೇಣೂರು ಠಾಣೆಯ ಪೊಲೀಸ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!