Saturday, April 27, 2024
spot_imgspot_img
spot_imgspot_img

ವೇಣೂರು: ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣ

- Advertisement -G L Acharya panikkar
- Advertisement -

ಬೆಳ್ತಂಗಡಿ: ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಪದವಿ ಪೂರ್ವ ಕಾಲೇಜು ವೇಣೂರು ಇವರ ಸಂಯುಕ್ತಾಶ್ರಯದಲ್ಲಿ “ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ” ಎಂಬ ವಿಷಯದಲ್ಲಿ ವಿಚಾರ ಸಂಕಿರಣವು ವೇಣೂರಿನ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ಬುಧವಾರ ನಡೆಯಿತು.

ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಹಾಗೂ ವೇಣೂರು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರ್ಜುನ್ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು.

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಗಂಗಾಧರ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಉದ್ಘಾಟಿಸಿದರು. ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ, ಕಾಲೇಜು ಅಡಳಿತ ಮಂಡಳಿ ಉಪಾಧ್ಯಕ್ಷ ಸುಂದರ್ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಇದೇ ವೇಳೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಹಾಗೂ ವೇಣೂರು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರ್ಜುನ್ ಭಟ್ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಪತ್ರಕರ್ತರ ಸಂಘ, ಬೆಳ್ತಂಗಡಿ ಘಟಕದ ಅಧ್ಯಕ್ಷ ವೆಂಕಟೇಶ ಬೆಂಡೆ ಸ್ವಾಗತಿಸಿ, ಪತ್ರಕರ್ತ ದತ್ತಾತ್ರೇಯ ಹೆಗ್ಡೆ ಪ್ರಸ್ತಾವನೆ ಗೈದರು. ಪತ್ರಕರ್ತ ಲತೀಫ್ ನೇರಳಕಟ್ಟೆ ವಂದಿಸಿ, ಕಾಲೇಜು ಉಪನ್ಯಾಸಕ ವೆಂಕಟೇಶ್ ಪಿ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!