Friday, April 26, 2024
spot_imgspot_img
spot_imgspot_img

ಶತಕೋಟಿ ಲಸಿಕೆ ನೀಡಿಕೆ; ದೇಶದ ಸಾಧನೆ ಶ್ಲಾಘಿಸಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ನವದೆಹಲಿ: ಭಾರತವು ಕೊವಿಡ್ ಲಸಿಕಾ ಅಭಿಯಾನದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿದ ಸಾಧನೆ ಮಾಡಿದೆ. ಚೀನಾದ ನಂತರ ಈ ಸಾಧನೆ ಮಾಡಿದ ವಿಶ್ವದ ಎರಡನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಪ್ರಧಾನಿ ಭಾಷಣದ ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯವಿದೆ.

ಭಾರತವು ಅಕ್ಟೋಬರ್ 21 ರಂದು ಶತಕೋಟಿ ಡೋಸ್ ಲಸಿಕೆ ನೀಡಿಕೆಯ ಮೈಲಿಗಲ್ಲನ್ನು ತಲುಪಿತ್ತು. ಆಗ ಪ್ರಧಾನಿ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದರು. ‘ದೇಶದ 130 ಕೋಟಿ ಭಾರತೀಯರ ಸಾಮೂಹಿಕ ಚೈತನ್ಯ, ಉದ್ಯಮಶೀಲತೆ, ಭಾರತೀಯ ವಿಜ್ಞಾನದ ಸಾಧನೆಗೆ 100 ಕೋಟಿ ಡೋಸ್ ಲಸಿಕೆ ನೀಡಿಕೆಯ ಮೈಲಿಗಲ್ಲು ಸಾಕ್ಷಿಯಾಗಿದೆ. ಈ ಸಾಧನೆ ಮಾಡಿದ ಭಾರತಕ್ಕೆ ಅಭಿನಂದನೆ. ಇದಕ್ಕೆ ಕಾರಣರಾದ ವೈದ್ಯರು, ನರ್ಸ್‌ಗಳು, ದಾದಿಯರಿಗೂ ಅಭಿನಂದನೆಗಳು’ ಎಂದು ಟ್ವೀಟ್ ಮೂಲಕ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದರು.

ನಿನ್ನೆ ಪ್ರಧಾನಿ ಭಾಷಣದಲ್ಲಿ, ಕಡಿಮೆ ಸಮಯದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ಭಾರತದ ಲಸಿಕೆ ನೀಡಿಕೆ ವೈಜ್ಞಾನಿಕ ಆಧಾರದಲ್ಲಿ ನಡೆದಿದೆ ಎಂದು ನುಡಿದಿದ್ದಾರೆ. ಸವಾಲುಗಳಿಗೆ ಅನುಗುಣವಾಗಿ ಸಾಮರ್ಥ್ಯವನ್ನು ಹೆಚ್ಚಿಸಿದ್ದೇವೆ. ದೇಶದಲ್ಲಿ ವಿಶ್ವಾಸ, ಉತ್ಸಾಹ, ಹುಮ್ಮಸ್ಸಿನ ವಾತಾವರಣ ಇದೆ. ಸ್ಟಾರ್ಟ್‌ ಅಪ್‌ನಲ್ಲಿ ದಾಖಲೆ ಮಟ್ಟದಲ್ಲಿ ಹೂಡಿಕೆ ಆಗುತ್ತಿದೆ. ಕೊವಿನ್ ಪೋರ್ಟಲ್ ಈಗ ವಿಶ್ವದ ಆಕರ್ಷಣೆಯಾಗಿದೆ. ಮೇಡ್ ಇನ್ ಇಂಡಿಯಾದ ಶಕ್ತಿ ಬಹಳ ದೊಡ್ಡದಾಗಿದೆ. ದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸಕಾರಾತ್ಮಕ ವಾತಾವರಣ ಇದೆ. ವ್ಯವಹಾರದಲ್ಲಿ ವೋಕಲ್ ಫಾರ್ ಲೋಕಲ್‌ ಜಾರಿಗೆ ತರಬೇಕು. ಕಳೆದ ವರ್ಷ ದೀಪಾವಳಿ ವೇಳೆ ಆತಂಕದ ಕಾರ್ಮೋಡ ಇತ್ತು. ಆದರೆ ಈ ಬಾರಿ 100 ಕೋಟಿ ಡೋಸ್​ ನೀಡಿಕೆ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ ಎಂದು ಅವರು ಹೇಳಿದ್ದಾರೆ.

- Advertisement -

Related news

error: Content is protected !!