Friday, May 17, 2024
spot_imgspot_img
spot_imgspot_img

ಶಮಾನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿ ಪತ್ತೆ..!

- Advertisement -G L Acharya panikkar
- Advertisement -
vtv vitla
vtv vitla

ಬೆಂಗಳೂರು: ಶಮಾನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿಯನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಪತ್ತೆ ಮಾಡಿದ್ದಾರೆ. ನಾಪತ್ತೆಯಾಗಿದ್ದ ಯುವತಿ ಅನುಷ್ಕಾ ಎನ್ನಲಾಗಿದೆ.

ಗುಜರಾತ್ ಆಶ್ರಮದಲ್ಲಿದ್ದ ಅವರನ್ನು ಆಶ್ರಮದಿಂದ ಕರೆತಂದು ಪೊಲೀಸರು ಪೋಷಕರಿಗೆ ಒಪ್ಪಿಸಿದ್ದಾರೆ. ಶಮನಿಸಂನಲ್ಲಿ ಆಸಕ್ತಿ ಹೊಂದಿದ್ದ ಯುವತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮನೆ ಬಿಟ್ಟು ಹೋಗಿದ್ದಾಗಿ ಯುವತಿ ಹೇಳಿಕೆ ನೀಡಿದ್ದಾರೆ. ಇದೀಗ ಪೊಲೀಸರು ಗುಜರಾತ್​ನಿಂದ ಕರೆತಂದು ಆಕೆಯನ್ನು ಪೋಷಕರಿಗೆ ಒಪ್ಪಿಸಿದ್ದಾರೆ

vtv vitla

ಘಟನೆಯ ವಿವರ: ಶಮಾನಿಸಂ (ಆತ್ಮಗಳೊಂದಿಗೆ ಮಾತನಾಡುವುದು) ಎನ್ನುವುದು ಧಾರ್ಮಿಕ ಆಚರಣೆಯಾಗಿದ್ದು, ಅದರ ಅಭ್ಯಾಸ ಮಾಡುವವರು ಅರೆ ಪ್ರಜ್ಞಾವಸ್ಥ ಸ್ಥಿತಿಯಲ್ಲಿ ಆತ್ಮಗಳೊಂದಿಗೆ ಮಾತುಕತೆ ನಡೆಸುತ್ತಾರೆ ಎಂಬ ನಂಬಿಕೆಯ ಮೇಲೆ ಆಧಾರಿತವಾಗಿದೆ. ಇದು ಪುರಾತನ ಹೀಲಿಂಗ್ ವಿಧಾನ ಎನ್ನಲಾಗಿದೆ. ಇದರಿಂದ ಆಕರ್ಷಿತರಾಗಿದ್ದ ಅನುಷ್ಕಾ, ಮನೆ ಬಿಟ್ಟು ತೆರಳಿದ್ದರು. ಅವರು ನಾಪತ್ತೆಯಾಗಿ ಸುಮಾರು ಎರಡು ತಿಂಗಳಾಗಿತ್ತು.

ಇದನ್ನೂ ಓದಿ: ವಿಟ್ಲ: ಬಯಲಾಯ್ತು ರೋಹಿಣಿ ಅಲಿಯಾಸ್ ರೂಪಾಳ ಅಸಲಿ ವಿರೂಪ..!

ಅನುಷ್ಕಾ 12ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಶಾಮನಿಸಂನತ್ತ ಆಕರ್ಷಿತರಾಗಿದ್ದರು. ಆಕೆಯ ಪೋಷಕರು ಆಧ್ಯಾತ್ಮಿಕ ಜೀವನ ತರಬೇತುದಾರರಾಗಿದ್ದು, ಸೈಕೆಡೆಲಿಕ್ ಶಿಕ್ಷಣ ತಜ್ಞರಿಂದ ಪ್ರಭಾವಿತಳಾಗಿದ್ದರು. ಯುವತಿ ಶಾಮನಿಸಂ ಅನ್ನು ಅಭ್ಯಾಸ ಮಾಡುವ ಬಯಕೆಯ ಬಗ್ಗೆ ತನ್ನ ತಂದೆ-ತಾಯಿಯ ಜೊತೆ ಮಾತನಾಡಿದ್ದಳು.

vtv vitla

ಮಗಳಿಗೆ ಮನೆ ತೊರೆಯುವ ನಿರ್ಧಾರ ತೆಗೆದುಕೊಳ್ಳುವಂತೆ ಯಾರೋ ಪ್ರಭಾವ ಮಾಡಿದ್ದಾರೆ ಎಂದು ಆಕೆಯ ತಂದೆ ಅಭಿಷೇಕ್ ಹೇಳಿದ್ದರು. ಆಕೆ ಅಪ್ರಾಪ್ತಳಾಗಿದ್ದು, ಅವಳು ತನ್ನ ಸ್ವಂತ ನಿರ್ಣಯದ ನಿರ್ಧಾರವನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲದಿರಬಹುದು. ಅವಳನ್ನು ಯಾರೋ ಪ್ರಭಾವಿಸಿದ್ದಾರೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದರು. ಅನುಷ್ಕಾ ಅಕ್ಟೋಬರ್ 31ರಂದು ಮನೆ ಬಿಟ್ಟು ತೆರಳಿದ್ದರು.

ಈ ಪ್ರಕರಣದ ಬಗ್ಗೆ ಪೊಲೀಸರು ಕೂಡ ತನಿಖೆ ನಡೆಸಿದ್ದರು. ಅನುಷ್ಕಾಳ ಚಲನವಲನವನ್ನು ಸಿಸಿಟಿವಿ ಕ್ಯಾಮೆರಾ ಮೂಲಕ ವಿಶ್ಲೇಷಿಸಿದ್ದೇವೆ ಎಂದು ಬೆಂಗಳೂರು ಉತ್ತರದ ಉಪ ಪೊಲೀಸ್ ಆಯುಕ್ತ ವಿನಾಯಕ ಪಾಟೀಲ್ ಹೇಳಿದ್ದರು. ಸುಮಾರು ಎರಡು ತಿಂಗಳಿನಿಂದ ತಮ್ಮ ಮಗಳ ಸುಳಿವಿಗಾಗಿ ಕಾಯುತ್ತಿದ್ದ ಅನುಷ್ಕಾ ಪೋಷಕರು ಇತ್ತೀಚೆಗೆ ಪೊಲೀಸರೊಂದಿಗೆ ಕೆಲಸ ಮಾಡುವುದರ ಜೊತೆಗೆ ಸಾರ್ವಜನಿಕರ ಮೊರೆ ಹೋಗಿದ್ದರು. ಅವರು ತಮ್ಮ ಮಗಳನ್ನು ಹುಡುಕಲು ಸಹಾಯ ಮಾಡುವಂತೆ ಟ್ವಿಟರ್‌ನಲ್ಲಿ ಮನವಿ ಮಾಡಿದ್ದರು. ಇದೀಗ ಅಂತಿಮವಾಗಿ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಯುವತಿಯನ್ನು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ.

- Advertisement -

Related news

error: Content is protected !!