- Advertisement -
- Advertisement -


ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಅಸುನೀಗಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮುಂಜಾನೆ ಈ ಘಟನೆ ನಡೆದಿದೆ.

ಶಾಲಾ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -