Thursday, May 2, 2024
spot_imgspot_img
spot_imgspot_img

ಶಾಸಕ ಸತೀಶ್ ರೆಡ್ಡಿಯ 2 ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

- Advertisement -G L Acharya panikkar
- Advertisement -

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿಗೆ ಸಂಬಂಧಿಸಿದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಫಾರ್ಚೂನರ್ ಕಾರು ಸೇರಿದಂತೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿವೆ.

ಮಧ್ಯರಾತ್ರಿ 1.30ರ ಸುಮಾರಿಗೆ ನಾಲ್ಕು ಜನ ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್​​ಗಳನ್ನ ತಂದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

- Advertisement -

Related news

error: Content is protected !!