Thursday, March 28, 2024
spot_imgspot_img
spot_imgspot_img

ಶಾಸಕ ಹರೀಶ್ ಪೂಂಜಾರವರ ಮೇಲೆ ತಲ್ವಾರ್ ದಾಳಿ ಪ್ರಕರಣ; ಝಳಪಿಸಿದ ಆಯುಧ ಪೊಲೀಸ್ ವಶಕ್ಕೆ..!

- Advertisement -G L Acharya panikkar
- Advertisement -

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳ ನಿವಾಸದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಝಳಪಿಸಿದ ಆಯುಧವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಿಂದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಸ್ಕಾರ್ಪಿಯೊದಿಂದ ಒಂದು “ಸ್ಪ್ಯಾನರ್ ರಾಡ್ ವ್ರೆಂಚ್” (ವಾಹನದಲ್ಲಿ ಬಳಸುವ ಉಪಕರಣ) ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ದೂರುದಾರರಿಗೆ ಬೆದರಿಕೆ ಹಾಕಲು ಸ್ಪ್ಯಾನರ್ (ಹೊಳೆಯುವ ಎಲ್ ಆಕಾರದ ಉಪಕರಣ) ಬಳಸಿದ್ದರು. ನಿಂದಿಸುವ ವೇಳೆ ಸ್ಪ್ಯಾನರ್ ಬೀಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಅ.13 ರಂದು ರಾತ್ರಿ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರು ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರನ್ನು ಪಡೀಲ್ ನಿಂದ ಫರಂಗಿಪೇಟೆ ಯವರೆಗೆ ಬೆನ್ನಟ್ಟಿದ್ದು, ಫರಂಗಿಪೇಟೆ ಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ಅವಾಚ್ಯ ಶಬ್ದದಿಂದ ಬೈದು ತಲವಾರು ಝಳಪಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!