- Advertisement -
- Advertisement -
ಹಾಸನ: ನಿರಂತರ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ.

ಈ ರಸ್ತೆ ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ನಿರಂತರ ಮಳೆಯಿಂದಾಗಿ ರಸ್ತೆ ಕುಸಿತ ಉಂಟಾಗಿದ್ದು, ಘಟನಾ ಸ್ಥಳದಲ್ಲಿ ರಸ್ತೆ ಸರಿಪಡಿಸುವ ಕಾರ್ಯಾಚರಣೆ ಆರಂಭಗೊಂಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವವರು ಬೇರೆ ರಸ್ತೆಯಲ್ಲಿ ಬರಲು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.



- Advertisement -








