Friday, April 26, 2024
spot_imgspot_img
spot_imgspot_img

ಶಿರಾಡಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಟೆಂಪೋ ಟ್ರಾವೆಲರ್; ಐವರಿಗೆ ಗಾಯ!

- Advertisement -G L Acharya panikkar
- Advertisement -

ಶಿರಾಡಿ: ಇಲ್ಲಿನ NH – 75ರ ಶಿರಾಡಿಯಲ್ಲಿ ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರು ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಟೆಂಪೊ ಟ್ರಾವೆಲ್ಲರ್ ಸುಮಾರು 60 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

- Advertisement -

Related news

error: Content is protected !!