Tuesday, May 7, 2024
spot_imgspot_img
spot_imgspot_img

ಶಿವಮೊಗ್ಗದಲ್ಲಿ ಮೂರು ದಿನಗಳ ಕಾಲ ರಾತ್ರಿ ಡಬಲ್‌ ರೈಡಿಂಗ್‌ ನಿಷೇಧ;ಎಡಿಜಿಪಿ ಅಲೋಕ್ ಕುಮಾರ್ ಆದೇಶ

- Advertisement -G L Acharya panikkar
- Advertisement -

ಶಿವಮೊಗ್ಗ: ಶಿವಮೊಗ್ಗದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಹೊತ್ತು ಅನಗತ್ಯ ಬೈಕ್ ಸಂಚಾರ ನಿಷೇಧಿಸಿ, ಬೈಕ್ ನಲ್ಲಿ ಇಬ್ಬರು ಯುವಕರು ಸಂಚರಿಸದಂತೆ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ವೀರ ಸಾವರ್ಕರ್ ಫೋಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಚೂರಿ ಇರಿತ ಘಟನೆಗಳು ನಡೆದ ಕಾರಣ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ಕುರಿತು ಮಾತನಾಡಿರುವ ಅವರು, ದ್ವಿಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನವರನ್ನು ಕೂರಿಸಿಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. 40 ವರ್ಷ ಮೇಲ್ಪಟ್ಟ ವಯಸ್ಕರು ಮತ್ತು ಮಹಿಳೆಯರಿಗೆ ರಿಯಾಯಿತಿ ನೀಡಲಾಗಿದೆ.

ಅಲ್ಲದೆ ರಾತ್ರಿ 9 ರಿಂದ ಬೆಳಗಿನ ಜಾವ 5ರವರೆಗೆ ತುರ್ತು ಸಂದರ್ಭವನ್ನು ಹೊರತುಪಡಿಸಿ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶಿದ್ದಾರೆ.

ಇನ್ನು ಬೇರೆ ಬೇರೆ ಜಿಲ್ಲೆಗಳಿಂದ ಪೊಲೀಸ್ ಅಧಿಕಾರಿಗಳು ಬಂದಿದ್ದು, ತುಂಗಾನಗರ, ದೊಡ್ಡಪೇಟೆ, ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೆಟ್ರೋಲಿಂಗ್ ಮಾಡಿದ್ದೇ ವೆ ಎಂದು ತಿಳಿಸಿದರು. ಶಿವಮೊಗ್ಗದಲ್ಲಿ ಈಗಾಗಲೇ 5 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಬಂಧಿಸಲಾಗಿದ್ದು, ಯಾವುದೇ ಮೆರವಣಿಗೆ, ಸಭೆ, ಸಮಾರಂಭ ಮತ್ತು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇಧಿಸಲಾಗಿದೆ.

- Advertisement -

Related news

error: Content is protected !!