Sunday, May 5, 2024
spot_imgspot_img
spot_imgspot_img

ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಕಡ್ಡಾಯ

- Advertisement -G L Acharya panikkar
- Advertisement -

ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಜೋಡಿಸಬೇಕೆಂದು ಇಲಾಖೆ ಸೂಚಿಸಿದೆ.

ಈಗಾಗಲೇ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕವಿನಾಯಿತಿ ಮೊತ್ತವೂ ಮಂಜೂರಾಗಿದೆ. ಆದರೆ, ಕೆಲವೊಂದು ವಿದ್ಯಾರ್ಥಿಗಳಿಗೆ ಶುಲ್ಕವಿನಾಯಿತಿ ಮೊತ್ತ ಮಂಜೂರಾಗಿದ್ದು, ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆಯಾಗದ ಕಾರಣ, ಮಂಜೂರಾದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲು ಅಡಚಣೆ ಉಂಟಾಗಿದೆ. ಇಂತಹ ವಿದ್ಯಾರ್ಥಿಗಳು ಕೂಡಲೇ ಸಂಬಂಧಪಟ್ಟ ಬ್ಯಾಂಕ್‍ಗಳನ್ನು ಸಂಪರ್ಕಿಸಿ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿ, ಎನ್‍ಪಿಸಿಐ ನಲ್ಲಿ ಮ್ಯಾಪಿಂಗ್ ಮಾಡಿಸಬೇಕು ಎಂದು ತಿಳಿಸಲಾಗಿದೆ.

ಆಧಾರ್ ನಲ್ಲಿ ನಮೂದಾಗಿರುವ ಹೆಸರು ಹೊಂದಾಣಿಕೆ ಆಗಿರುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿರುವಂತೆ ಆಧಾರ್ ಕಾರ್ಡ್‍ನಲ್ಲಿಯೂ ಕೂಡ ತಮ್ಮ ಹೆಸರನ್ನು ತಿದ್ದುಪಡಿ ಮಾಡಿಸಬೇಕು. ತಪ್ಪಿದ್ದಲ್ಲಿ ಅವರಿಗೆ ಮಂಜೂರಾಗಿರುವ ಶುಲ್ಕವಿನಾಯಿತಿ ಮೊತ್ತವು ತನ್ನಿಂತಾನೆ ರದ್ದಾಗುವುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!