Saturday, May 18, 2024
spot_imgspot_img
spot_imgspot_img

ಶೈಕ್ಷಣಿಕ ವಿಚಾರದಲ್ಲಿ ಭಾರತವನ್ನು ವಿಶ್ವ ಗುರುವನ್ನಾಗಿಸಲಾಗುವುದು; ಅಮಿತ್ ಶಾ

- Advertisement -G L Acharya panikkar
- Advertisement -

ಮುಂದಿನ ದಿನಗಳಲ್ಲಿ ಭಾರತವನ್ನು ಜಾಗತಿಕ ಮಟ್ಟದಲ್ಲಿ ಜ್ಞಾನಾಧಾರಿತ ಶ್ರೇಷ್ಠ ಭಾರತವನ್ನಾಗಿ ರೂಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಇದು ಪ್ರಧಾನಿ ನರೇಂದ್ರ ನೇತೃತ್ವದ ಕೇಂದ್ರ ಸರಕಾರದ ಸಂಕಲ್ಪವಾಗಿದೆ. ಈ ಕಾರಣದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪೂರಕವಾಗಿದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ.

vtv vitla
vtv vitla

ಅಮಿತ್ ಶಾ ಅವರು ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯವನ್ನು ಅಧಿಕೃತವಾಗಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ಸಂಭವಿಸುತ್ತಿರುವ ಶೈಕ್ಷಣಿಕ ಕ್ರಾಂತಿಯಲ್ಲಿ ಭಾರತೀಯ ಪ್ರಾದೇಶಿಕ ಭಾಷೆಗಳಿಗೆ ಮಹತ್ವದ ಸ್ಥಾನವನ್ನು ಹೊಂದಿದೆ. ಎನ್ಇಪಿಯನ್ನು ಜಾರಿಗೆ ತರಲು ಹೊರಟಿರುವ ಮೊದಲ ರಾಜ್ಯ ಕರ್ನಾಟಕ ಎನ್ನುವುದು ಶ್ಲಾಘನೀಯ ವಿಚಾರ ಎಂದು ಅವರು ಹೇಳಿದ್ದಾರೆ.

ದೇಶದ ಪ್ರಗತಿಯ ದೃಷ್ಟಿಯಿಂದ ಮುಂದಿನ 25 ವರ್ಷಗಳಿಗೆ ಅತಿಶಯ ಮಹತ್ವವಿದ್ದು, ಭಾರತವು ವಿಶ್ವಗುರು ಎನಿಸಿಕೊಳ್ಳುವುದು ನಿಶ್ಚಿತ ಎಂದು ಅವರು ಹೇಳಿದರು.

- Advertisement -

Related news

error: Content is protected !!