Thursday, June 18, 2026
spot_imgspot_img
spot_imgspot_img

ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..?; ಪ್ರತಿಕ್ರಿಯೆ ನೀಡಿದ ಸಚಿವೆ

- Advertisement -
- Advertisement -

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂಬ ಸುದ್ದಿ ಕೇಳಿ ಬಂದ ಬೆನ್ನಲ್ಲೇ ಸ್ವತಃ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೇ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೇ ಕೆಲಸ ಮಾಡುತ್ತಿದ್ದೇನೆ. ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ. ಮುಂದೆಯೂ ಮೋದಿ ಪ್ರಧಾನಿಯಾಗಬೇಕು ಎನ್ನುವುದು ನನ್ನ ಇಚ್ಛೆ. ಮೋದಿ ಮತ್ತೆ ಪ್ರಧಾನಿ ಆಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಶೋಭಾ ಕರಮದ್ಲಾಜೆ ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

- Advertisement -

Related news

error: Content is protected !!