Thursday, July 3, 2025
spot_imgspot_img
spot_imgspot_img

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ

- Advertisement -
- Advertisement -
vtv vitla
vtv vitla

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ಶನಿವಾರ ಬೆಳ್ತಂಗಡಿ ವಿಘ್ನೇಶ್ ಸಿಟಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಹರಿದಾಸ್ ಎಸ್ , ಎಂ ಉದ್ಘಾಟಿಸಿದರು. ಭಾರತೀಯ ಕಾರ್ಮಿಕ ಕಲ್ಯಾಣ ಮಂಡಳಿಯ ವೈದ್ಯಾಧಿಕಾರಿ ಡಾ. ಭಾಗ್ಯಲಕ್ಮೀ ಮಾತನಾಡಿದರು. ವೇದಿಕೆಯಲ್ಲಿ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಉಪಾಧ್ಯಕ್ಷ , ನ್ಯಾಯವಾದಿ ಯಶವಂತ ಮರೋಳಿ , ನಿರ್ದೇಶಕರಾದ ಶಿವಕುಮಾರ್ ಎಸ್. ಎಂ , ಸುಕನ್ಯಾ ಹೆಚ್ , ವೈಜಯಂತಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾರ್ಮಿಕ ಕಲ್ಯಾಣ ಮಂಡಳಿ ವೈದ್ಯಾಧಿಕಾರಿಗಳಾದ ಡಾ. ರಜಾಕ್ , ಡಾ. ಆಯಿಶಾ ಜಿ , ಡಾ. ಸುಂದಿ ಎಸ್ ಸೇರಿದಂತೆ 12 ಸಿಬ್ಬಂದಿಗಳು ಉಪಸ್ಥಿತರಿದ್ದರು. ನೂರಾರು ಜನರು ಉಚಿತ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿದರು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!